ಕಲಬುರಗಿ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಕೋವಿಡ್-19 ಸಭೆ.

ಕಲಬುರಗಿ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಕೋವಿಡ್-19 ಸಭೆ.

ಬಳ್ಳಾರಿ,ಮಾ.30

ಎಲ್ಲ ರೀತಿಯ ಜ್ವರದ ಪ್ರಕರಣಗಳನ್ನು ಕಡ್ಡಾಯವಾಗಿ ತಪಾಸಣೆ ಮಾಡಬೇಕು ಎಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಡಾ.ಎನ್.ವಿ.ಪ್ರಸಾದ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕೋವಿಡ್-19 ಹಿನ್ನೆಲೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು,  ಪಡಿತರ ಪಡೆಯಲು ಒಟಿಪಿ ಕಡ್ಡಾಯಗೊಳಿಸಿರುವುದು ರದ್ದುಪಡಿಸಿ ರಿಜಿಸ್ಟರ್‍ನಲ್ಲಿ ಪಡಿತರ ಸಂಖ್ಯೆ ಮತ್ತು ಹೆಸರನ್ನು ನಮೂದಿಸಿಕೊಂಡು ಜನರಿಗೆ ಪಡಿತರ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮಕೈಗೊಳ್ಳುವುದಾಗಿ ತಿಳಿಸಿದ ಪ್ರಾದೇಶಿಕ ಆಯುಕ್ತ ಎನ್.ವಿ.ಪ್ರಸಾದ್ ಅವರು ಕೊರೊನಾ ಸೊಂಕು ವ್ಯಾಪಕವಾಗಿ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲ ಅಗತ್ಯ ಕ್ರಮಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲು  ಸೂಚಿಸಿದರು.

 ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ರೀತಿಯ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗದಿರುವುದು ಸಂತಸದ ಸಂಗತಿ,ಇದೇ ರೀತಿಯೇ ಮುಂದುವರಿಯಲಿ ಎಂದು ಆಶಿಸಿದ ಅವರು, ಕೋವಿಡ್-19ಗೆ ಬೇಕಾದ ಎಲ್ಲ ವೈದ್ಯಕೀಯ ಪರಿಕರಗಳು ಸಮರ್ಪಕವಾಗಿವೆಯೇ ಎಂಬುದರ ಕುರಿತು ಅಗತ್ಯ ಮಾಹಿತಿಯನ್ನು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರಿಂದ ಪಡೆದುಕೊಂಡರು.

ಸ್ಯಾನಿಟೈಸರ್ ಕೊರತೆ ಇಲ್ಲ: ಜಿಲ್ಲೆಯಲ್ಲಿ ಯಾವುದೇ ರೀತಿಯ ಸ್ಯಾನಿಟೈಸರ್ ಕೊರತೆ ಇಲ್ಲ

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಹಾಗೂ ಗ್ರಾಪಂ ಹಂತದವರೆಗೆ ಈಗಾಗಲೇ ವಿತರಿಸಲಾಗಿದೆ. ದಾಸ್ತಾನು ಕೂಡ ಸಮರ್ಪಕವಾಗಿದೆ ಎಂದು ಸಭೆಯ ಗಮನಕ್ಕೆ ತಂದ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಅಬಕಾರಿ ಇಲಾಖೆಯಿಂದ ಇತ್ತೀಚೆಗೆ ತರಿಸಿಕೊಳ್ಳಲಾದ 6850 ಮಿ.ಲೀ ಸ್ಯಾನಿಟೈಸರ್ ಜಿಲ್ಲೆಯಾದ್ಯಂತ ವಿತರಿಸಿದ ವಿವರಣೆ ನೀಡಿದರು. ಹರಪನಳ್ಳಿಯಲ್ಲಿಯೇ ಸ್ಯಾನಿಟೈಸರ್ ಉತ್ಪಾದಿಸಲಾಗುತ್ತಿದ್ದು,ಇದರ ಸಮಸ್ಯೆ ನಮ್ಮ ಜಿಲ್ಲೆಗಿಲ್ಲ ಎಂದರು.

ಕೋವಿಡ್-19 ತರಬೇತಿ

ವೈದ್ಯಾಧಿಕಾರಿಗಳಿಗೆ, ಅಂಬ್ಯುಲೆನ್ಸ್ ಸಿಬ್ಬಂದಿಗೆ, ಆಶಾ ಕಾರ್ಯಕರ್ತೆಯರಿಗೆ ಹಾಗೂ ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿದಂತೆ ಕೋವಿಡ್-19 ಕಾರ್ಯದಲ್ಲಿ ದುಡಿಯುತ್ತಿರುವ ಎಲ್ಲರಿಗೂ ವಿಮ್ಸ್ ನಿರ್ದೇಶಕ ದೇವಾನಂದ ಅವರ ನೇತೃತ್ವದಲ್ಲಿ ತರಬೇತಿ ನೀಡಲಾಗುತ್ತಿದೆ.

.ಕೋವಿಡ್-19 ಆಸ್ಪತ್ರೆಯನ್ನಾಗಿ ಬಳ್ಳಾರಿ ಜಿಲ್ಲಾಸ್ಪತ್ರೆ

ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುವುದಕ್ಕಾಗಿ ಜಿಲ್ಲಾಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ.  ಇಲ್ಲಿ ನೀಡಲಾಗುತ್ತಿರುವ ಹೊರ ಮತ್ತು ಒಳರೋಗಿಗಳ ಚಿಕಿತ್ಸೆಯನ್ನು ತಾತ್ಕಾಲಿಕವಾಗಿ ರದ್ದುಪಡಿಸಿ ವಿಮ್ಸ್‍ನಲ್ಲಿ ಚಿಕಿತ್ಸೆ ಪಡೆಯುತ್ತಿರುವುದಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 7ರಿಂದ 11ರವರೆಗೆ ಹಾಗೂ ಸಂಜೆ 5ರಿಂದ 7ರವರೆಗೆ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ .

Previous ಅಗತ್ಯ ವಸ್ತುಗಳ ಹೆಚ್ಚಿನ ದರ ಮಾರಾಟ ಮಾಡಿದಲ್ಲಿ ಸೂಕ್ತ ಕ್ರಮ.
Next ಜಿಲ್ಲೆಯಲ್ಲಿ 58777 ಜನರಿಗೆ ತಪಾಸಣೆ:ಡಿಸಿ ಎಸ್ ಎಸ್ ನಕುಲ್.

You might also like

0 Comments

No Comments Yet!

You can be first to comment this post!

Leave a Reply