ಲಂಚ ಪಡೆದ ಸಾರಿಗೆ ಅಧಿಕಾರಿಗಳ ಅಮಾನತು.

ಲಂಚ ಪಡೆದ ಸಾರಿಗೆ ಅಧಿಕಾರಿಗಳ ಅಮಾನತು.

ಬೆಂಗಳೂರು ನಗರ 03

ಬೆಂಗಳೂರು ಜಿಲ್ಲೆಯ ಆನೇಕಲ್ ತಾಲ್ಲೂಕು, ಅತ್ತಿಬೆಲೆ ಚೆಕ್ ಪೋಸ್ಟ್ ಅಲ್ಲಿ ನಿನ್ನೆ ರಾತ್ರಿ ಹಣ್ಣು ಮತ್ತು ತರಕಾರಿ ಸಾಗಣೆ ಮಾಡುತ್ತಿದ್ದ ವಾಹನ ಚಾಲಕರಿಂದ ಲಂಚ ಪಡೆದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯ ಇಬ್ಬರು ಬ್ರೇಕ್ ಇನ್ಸ್ ಪೆಕ್ಟರ್ ಗಳನ್ನು ಜಿಲ್ಲಾಧಿಕಾರಿಗಳಾದ ಜಿ ಎನ್ ಶಿವಮೂರ್ತಿ ಅವರು ಅಮಾನತು ಮಾಡಿದ್ದಾರೆ.

ಚೆಕ್ ಪೋಸ್ಟ್ ಮೂಲಕ ಹಾದು ಹೋಗುವ ಎಲ್ಲಾ ಸಾರ್ವಜನಿಕರನ್ನು ತಪಾಸಣೆ ಮಾಡುವುದು ಹಾಗೂ ಚೆಕ್ ಪೋಸ್ಟ್‍ಗಳಲ್ಲಿ ಜೀವನಾವಶ್ಯಕ ವಸ್ತುಗಳಾದ ಹಾಲು, ಪಡಿತರ ದವಸ ಧಾನ್ಯಗಳು ಹಣ್ಣು ಮತ್ತು ತರಕಾರಿ, ಪೆಟ್ರೋಲ್, ಡೀಸೆಲ್, ಮತ್ತು ಔಷಧಿಗಳನ್ನು ಮಾತ್ರ ಸಾಗಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ  ಹಣ್ಣು ಮತ್ತು ತರಕಾರಿಗಳನ್ನು ಮಾರುಕಟ್ಟೆಗೆ  ಸಾಗಿಸುತ್ತಿದ್ದ ವಾಹನವನ್ನು ತಡೆಗಟ್ಟಿ ವಾಹನ ಚಾಲಕರಿಂದ ಹಣವನ್ನು ವಸೂಲಿ ಮಾಡುತ್ತಿರುವುದನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಾಯಕ ಪೊಲೀಸ್ ಅಧೀಕ್ಷಕರು, ಹಾಗೂ ಬೆಂಗಳೂರು ನಗರ ಸಹಾಯಕ ಪೊಲೀಸ್ ಅಧೀಕ್ಷಕರು ಪರಿಶೀಲಿಸಿ ನೌಕರರ ವಿರುದ್ದ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಬ್ರೇಕ್ ಇನ್ಸ್ ಪೆಕ್ಟರ್‍ಗಳಾದ ಟಿ. ಕೆ ಜಯಣ್ಣ ಹಾಗೂ ಕರಿಯಪ್ಪ ಸೇರಿದಂತೆ ಇವರೊಂದಿಗೆ ಶಾಮೀಲಾಗಿದ್ದ ಮಾಜಿ ಹೋಮ್ ಗಾರ್ಡ್ ವಿವೇಕ್ ಅವರನ್ನು ಚಾಲಕರಿಂದ ಲಂಚ ಪಡೆದ ಹಿನ್ನೆಲೆ ಅಪರ ಪೋಲೀಸ್ ಅಧೀಕ್ಷಕರಾದ ಸಜಿತ್ ಅವರು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಈ ಪ್ರಕರಣದ ವಿಚಾರಣೆ ನಡೆಸಲಾಗುತ್ತಿದೆ

Previous ಜಿಲ್ಲಾದ್ಯಂತ ಕಟ್ಟೆಚ್ಚರ ವಹಿಸಿ, ಕರೋನಾ ನಿಯಂತ್ರಿಸಿ.
Next ದೆಹಲಿಗೆ ಪ್ರಯಾಣ ಮಾಡಿ ಬಂದವರ ಮಾಹಿತಿ ನೀಡಲು ಸೂಚನೆ.

You might also like

0 Comments

No Comments Yet!

You can be first to comment this post!

Leave a Reply