ಅಮಾವಶ್ಯಕವಾಗಿ ತಿರುಗಾಡುವವರ ಮೇಲೆ ಕ್ರಮ.

ಅಮಾವಶ್ಯಕವಾಗಿ ತಿರುಗಾಡುವವರ ಮೇಲೆ ಕ್ರಮ.

ದಾವಣಗೆರೆ ಏ.6.

ಭಾರತವು ಸೇರಿದಂತೆ ವಿಶ್ವದಾದ್ಯಂತ ಮಹಾಮಾರಿಯಾಗಿ ಹಬ್ಬುತ್ತಿರುವ ಕೋವಿಡ್-19ರ ಹರಡುವಿಕೆಯನ್ನು ತಡೆಗಟ್ಟಲು ಸಾಮಾಜಿಕ ಅಂತರ ಖಾಯ್ದುಕೊಳ್ಳುವಿಕೆ ಮತ್ತು ಪ್ರತ್ಯೇಕತೆಯನ್ನು ಅಳವಡಿಸಿಕೊಳ್ಳುವುದು ಅತೀ ಮುಖ್ಯವಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ 5 ವ್ಯಕ್ತಿಗಳಿಗಿಂತ ಹೆಚ್ಚಿನ ಎಲ್ಲಾ ಸಮೂಹ ಒಗ್ಗೂಡುವಿಕೆಯನ್ನು ನಿಷೇಧಿಸಿ ದಾವಣಗೆರೆ ಜಿಲ್ಲೆಯಾದ್ಯಂತ (ಕಲಂ 144) ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದೆ.

 ನಿಷೇದಾಜ್ಞೆಯನ್ನು ಜಾರಿಗೊಳಿಸಿದರೂ ಸಹ ಸಾರ್ವಜನಿಕರು ಅನಾವಶ್ಯಕವಾಗಿ ವಾಹನಗಳೊಂದಿಗೆ ರಸ್ತೆಯಲ್ಲಿ ತಿರುಗಾಡುತ್ತಿರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವುದು ಕಂಡುಬಂದಿರುತ್ತದೆ. ಇದು ತುಂಬಾ ಕಳವಳಕಾರಿಯಾದ ವಿಷಯವಾಗಿರುತ್ತದೆ. ಕೋವಿಡ್-19 ವೈರಾಣು ಹರಡುವಿಕೆಯನ್ನು ತಡೆಯಲು ಸಾರ್ವಜನಿಕರ ಸಹಕಾರ ಅತ್ಯವಶ್ಯಕವಾಗಿರುತ್ತದೆ.

 ಜಿಲ್ಲಾಡಳಿತದಿಂದ ಅನುಮತಿ/ಪಾಸ್‍ನ್ನು ಪಡೆದಿರುವ ವ್ಯಕ್ತಿಗಳು ಮತ್ತು ಸಂಸ್ಥೆಗಳು ಹಾಗೂ ಅವಶ್ಯಕ ಸೇವಾ ವ್ಯಾಪ್ತಿಯಲ್ಲಿರುವ ಇಲಾಖೆಯ ಗುರುತಿನ ಚೀಟಿ ಹೊಂದಿರುವ ಅಧಿಕಾರಿ/ಸಿಬ್ಬಂದಿಗಳನ್ನು ಹೊರತುಪಡಿಸಿ, ಉಳಿದವರು ಅನವಶ್ಯಕವಾಗಿ ರಸ್ತೆಯಲ್ಲಿ ತಿರುಗಾಡದಂತೆ ವಿನಂತಿಸಲಾಗಿದೆ. ಆದಾಗ್ಯೂ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ರಸ್ತೆಯಲ್ಲಿ ಅನವಶ್ಯಕವಾಗಿ ವಾಹನಗಳ ಮೂಲಕ ಹಾಗೂ ಗುಂಪು ಗುಂಪಾಗಿ ತಿರುಗಾಡುವವರ ಮೇಲೆ ಹಾಗೂ ಜಿಲ್ಲಾಡಳಿತದಿಂದ ಪಡೆದ ಪಾಸ್‍ಗಳನ್ನು ದುರ್ಬಳಕೆ ಮಾಡಿಕೊಳ್ಳುವವರ ಮೇಲೆ ನಗರದಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾಗಳು ಹಾಗೂ ಜಾರಿ ಅಧಿಕಾರಿ / ಸಿಬ್ಬಂದಿಗಳ ನೆರವಿನ ಮೂಲಕ ಪರಿಶೀಲಿಸಿ, ಅಂತಹವರುಗಳ ಮೇಲೆ ಭಾರತೀಯ ದಂಡ ಸಂಹಿತೆಯ ಕಲಂ 188 ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 51 ರಿಂದ 60 ರವರೆಗೆ ಕಾನೂನುಗಳನ್ವಯ ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಸಾರ್ವಜನಿಕರಿಗೆ ತಿಳಿಸಿದ್ದಾರೆ.

Previous ನಿಗದಿತ ದರದಲ್ಲಿ ಚಿಕನ್ ಮತ್ತು ಮಟನ್ ಮಾರಾಟ.
Next ಕೊರೋನಾ ಭೀತಿ: ನಿಖಿಲ್-ರೇವತಿ ಮದ್ವೆ ಪ್ಲಾನ್ ದಿಢೀರ್ ಚೇಂಜ್..!

You might also like

0 Comments

No Comments Yet!

You can be first to comment this post!

Leave a Reply