ಕೃಷಿ ಚಟುವಟಿಕೆ; ಬೀಜ-ಗೊಬ್ಬರ ಮಾರಾಟ, ಸಾಗಾಣಿಕೆಗೆ ನಿರ್ಬಂಧವಿಲ್ಲ.

ಕೃಷಿ ಚಟುವಟಿಕೆ; ಬೀಜ-ಗೊಬ್ಬರ ಮಾರಾಟ, ಸಾಗಾಣಿಕೆಗೆ ನಿರ್ಬಂಧವಿಲ್ಲ.

ಬೆಳಗಾವಿ, ಏ.೬

ಲಾಕ್ ಡೌನ್ ಸಂದರ್ಭದಲ್ಲಿ ಕೃಷಿಯ ದೈನಂದಿನ ಚಟುವಟಿಕೆಗಳು ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳದಂತೆ ಕ್ರಮ ಕೈಗೊಳ್ಳುವುದರ ಜತೆಗೆ ಕೃಷಿ ಉತ್ಪನ್ನಗಳ ಮಾರಾಟ, ಸಾಗಾಣಿಕೆ ಹಾಗೂ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಬೀಜ-ಗೊಬ್ಬರ ಮತ್ತಿತರ ಸಾಮಗ್ರಿಗಳ ಪೂರೈಕೆ ವ್ಯತ್ಯಯವಾಗದಂತೆ ಎಲ್ಲ ವ್ಯವಸ್ಥೆ ಕಲ್ಪಿಸಬೇಕು ಎಂದು ಕೃಷಿ ಇಲಾಖೆಯ ಸಚಿವರಾದ ಬಿ.ಸಿ.ಪಾಟೀಲ ಸೂಚನೆ ನೀಡಿದ್ದಾರೆ. ಕೋವಿಡ್ -೧೯ ಹಿನ್ನೆಲೆಯಲ್ಲಿ ಕೃಷಿ ಸಂಬಂಧಿತ ವಿಷಯಕ್ಕೆ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಈ ವಿಷಯ ತಿಳಿಸಿದ್ದಾರೆ.

ಮಳೆಯಾದರೆ ರೈತರಿಗೆ ಬೀಜ, ಗೊಬ್ಬರ ಮತ್ತಿತರ ಸಾಮಗ್ರಿಗಳ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕು. ಲಾಕ್ ಡೌನ್ ಹಿನ್ನೆಲೆಯಲ್ಲಿ ರೈತರು ಬೆಳೆದ ತರಕಾರಿ, ಹಣ್ಣುಗಳ ಮಾರಾಟ ಹಾಗೂ ಸಾಗಾಣಿಕೆಗೆ ಯಾವುದೇ ಅನಾನುಕೂಲ ಆಗಕೂಡದು, ಸರಕು ವಾಹನಗಳ ಸಂಚಾರಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ಬಂಧಗಳಿಲ್ಲ. ಒಂದು ವೇಳೆ ಎಲ್ಲಿಯಾದರೂ ಸರಕು ಸಾಮಗ್ರಿಗಳನ್ನು ಸಾಗಿಸುವ ವಾಹನಗಳಿಗೆ ತಡೆಯೊಡ್ಡಿದರೆ ಸರ್ಕಾರ ಮತ್ತು ಜಿಲ್ಲಾಡಳಿತದ ಗಮನಕ್ಕೆ ತಂದರೆ ಸಮಸ್ಯೆ ಪರಿಹರಿಸಲಾಗುವುದು ಎಂದು ಸಚಿವ ಬಿ.ಸಿ.ಪಾಟೀಲ ತಿಳಿಸಿದ್ದಾರೆ.

Previous ರಾಜ್ಯದಲ್ಲಿ ಹಕ್ಕಿಜ್ವರ ಕಂಡುಬಂದಿಲ್ಲ.
Next ನಿಗದಿತ ದರದಲ್ಲಿ ಚಿಕನ್ ಮತ್ತು ಮಟನ್ ಮಾರಾಟ.

You might also like

0 Comments

No Comments Yet!

You can be first to comment this post!

Leave a Reply