ರಾಜ್ಯದಲ್ಲಿ ಹಕ್ಕಿಜ್ವರ ಕಂಡುಬಂದಿಲ್ಲ.

ರಾಜ್ಯದಲ್ಲಿ ಹಕ್ಕಿಜ್ವರ ಕಂಡುಬಂದಿಲ್ಲ.

ಬೆಳಗಾವಿ, ಏ.೬

ರಾಜ್ಯದಲ್ಲಿ ಕೋಳಿ ಅಥವಾ ಹಕ್ಕಿಜ್ವರ ವರದಿಯಾಗಿಲ್ಲ. ಆದ್ದರಿಂದ ಕೋಳಿ ಮಾಂಸ ತಿಂದರೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದು ಸಚಿವ ಬಿ.ಸಿ.ಪಾಟೀಲ ಸ್ಪಷ್ಟಪಡಿಸಿದರು. ವ್ಯಾಪಾರ, ವಹಿವಾಟು ನಡೆಸಲು ಯಾವುದೇ ರೀತಿಯ ಸಮಯ ನಿರ್ಬಂಧ ವಿಧಿಸಬಾರದು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಬೆಳಗಾವಿಯಲ್ಲಿ ನಡೆದ ಸಭೆಯಲ್ಲಿಮಾತನಾಡಿದ ಅವರು ಸಾಮಾಜಿಕ ಆರೋಗ್ಯದ ದೃಷ್ಟಿಯಿಂದ ಲಾಕ್ ಡೌನ್ ಜಾರಿಗೆ ತರಲಾಗಿದೆ. ಅನಿವಾರ್ಯವಾಗಿ ಕೆಲವೊಂದು ನಿರ್ಬಂಧ ವಿಧಿಸಲಾಗಿದ್ದು ಜನರು ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿಕೊಂಡರು.

 ಈ ಸಂದರ್ಭದಲ್ಲಿ ಮಾತನಾಡಿದ ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ ಅವರು, ನೆರೆಯ ರಾಜ್ಯಗಳಿಗೆ ಪೂರೈಕೆಯಾಗುವ ಹಣ್ಣು-ತರಕಾರಿ ಸೇರಿದಂತೆ ಇತರೆ ಸಾಮಗ್ರಿಗಳನ್ನು ಸರಾಗವಾಗಿ ಸಾಗಿಸಲು ಆಯಾ ರಾಜ್ಯದ ಗಡಿಯ ಜಿಲ್ಲಾಧಿಕಾರಿಗಳ ಜತೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವಂತೆ ತಿಳಿಸಿದರು.

ಈ ಬಗ್ಗೆ ಈಗಾಗಲೇ ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಜತೆ ಅನೇಕ ಬಾರಿ ಚರ್ಚಿಸಲಾಗಿದೆ. ಆದಾಗ್ಯೂ ಸಮಸ್ಯೆ ಉದ್ಭವಿಸಿದಾಗ ತಮ್ಮ ಗಮನಕ್ಕೆ ತಂದರೆ ಮತ್ತೆ ಮಾತನಾಡುತ್ತೇನೆ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ತಿಳಿಸಿದರು.

Previous ಕೋವಿಡ್-19 ಮುನ್ನೆಚ್ಚರಿಕೆ- ಆರೋಗ್ಯದ ಹಿತದೃಷ್ಟಿಯಿಂದ ಪ್ರಾರ್ಥನಾ ಸ್ಥಳಗಳ ಭೇಟಿಗೆ ನಿರ್ಬಂಧ.
Next ಕೃಷಿ ಚಟುವಟಿಕೆ; ಬೀಜ-ಗೊಬ್ಬರ ಮಾರಾಟ, ಸಾಗಾಣಿಕೆಗೆ ನಿರ್ಬಂಧವಿಲ್ಲ.

You might also like

0 Comments

No Comments Yet!

You can be first to comment this post!

Leave a Reply