ಅನಗತ್ಯವಾಗಿ ರಸ್ತೆಯಲ್ಲಿ ತಿರುಗಾಡಿದರೆ ಡ್ರೋನ್ ಮೂಲಕ ಸೆರೆ.

ಅನಗತ್ಯವಾಗಿ ರಸ್ತೆಯಲ್ಲಿ ತಿರುಗಾಡಿದರೆ ಡ್ರೋನ್ ಮೂಲಕ ಸೆರೆ.

ಬಳ್ಳಾರಿ,ಏ.13

ಕೋವಿಡ್-19 ಲಾಕ್ಡೌನ್ ಹಿನ್ನಲೆಯಲ್ಲಿ ಹಳ್ಳಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಜಾಗೃತಿ ಮೂಡಿಸುವ ಕಾರ್ಯವನ್ನು ಗ್ರಾಮ ಪಂಚಾಯತಿಗಳು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್ ಅವರು ತಿಳಿಸಿದ್ದಾರೆ. ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್-19 ಹಿನ್ನಲೆಯಲ್ಲಿ ಗ್ರಾಮೀಣ ಮಟ್ಟದ ಟಾಸ್ಕ್ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ್ದಾರೆ.

 ಗ್ರಾಮಪಂಚಾಯತಿಗಳಿಗೆ ಬರುವ ವಿವಿಧ ಹಳ್ಳಿಗಳಲ್ಲಿ ಜನರ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಯಾವುದೆ ರೀತಿಯಲ್ಲು ವಿಳಂಬವಾಗದಂತೆ ನೋಡಿಕೊಳ್ಳ ಬೇಕು. ಲಾಕ್ಡೌನ್ ಹಿನ್ನಲೆಯಲ್ಲಿ ಕೆಲವೊಂದು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಅತಿ ಹೆಚ್ಚಾಗಿ ಕಂಡುಬರುತ್ತಿದ್ದು ಅಂತಹ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸುವ ನಿಟ್ಟಿನಲ್ಲಿ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

 ದೇಶದ್ಯಾಂತ ಲಾಕ್ಡೌನ್ ಮಾಡಿದ ಹಿನ್ನಲೆಯಲ್ಲಿ ಅನಗತ್ಯವಾಗಿ ಹೊರಗಡೆ ತಿರುಗಾಡುವವರ ಮೇಲೆ ಡ್ರೋನ್ ಮೂಲಕ ನಿಗಾವಹಿಸಲಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.

Previous ಜಿಲ್ಲಾ ಆಸ್ಪತ್ರೆ ಎಸ್ಡಿಎಮ್ ಮತ್ತು ಡಿಮಾನ್ಸ್ ಗಳಲ್ಲಿ ಕೋವಿಡ್-19 ಪ್ರಯೋಗಾಲಯ.
Next ಕೆಮ್ಮು, ಶೀತ, ಜ್ವರ ಮತ್ತು ಗಂಟಲುನೋವಿಗೆ ಮಾತ್ರೆ ಅಥವಾ ಸಿರಪ್ ಖರೀದಿಸಿದರೂ ಮಾಹಿತಿ ನೀಡಿ.

You might also like

0 Comments

No Comments Yet!

You can be first to comment this post!

Leave a Reply