ಬಳ್ಳಾರಿಯಲ್ಲಿ ಸಂಭ್ರಮದ ಕಲ್ಯಾಣ ಕರ್ನಾಟಕ ಉತ್ಸವ  ದಿನಾಚರಣೆ

ಬಳ್ಳಾರಿಯಲ್ಲಿ ಸಂಭ್ರಮದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ

ಬಳ್ಳಾರಿ-

 ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ 2013-14 ನೇ ಸಾಲಿನಿಂದ ಇಲ್ಲಿಯವರೆಗೆ ಬಳ್ಳಾರಿ ಜಿಲ್ಲೆಗೆ ಒಟ್ಟು ರೂ.862.54 ಕೋಟಿ ಅನುದಾನ ಹಂಚಿಕೆಯಾಗಿದ್ದು, ಒಟ್ಟು 3341 ಕಾಮಗಾರಿಗಳನ್ನು ಕೈಗೆತ್ತಿಕೊಂಡು 2904 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಇದಕ್ಕೆ ರೂ.598.60 ಕೋಟ ಅನುದಾನ ವೆಚ್ಚ ಮಾಡಲಾಗಿದೆ ಎಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರು ಹೇಳಿದ್ದಾರೆ.

 ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ನಿಮಿತ್ತ ಜಿಲ್ಲಾಡಳಿತದ ವತಿಯಿಂದ ನಗರದ ಮುನ್ಸಿಪಲ್ ಮೈದಾನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ವ್ಯಾಪ್ತಿಗೆ ಒಳಪಡುವ 6 ಜಿಲ್ಲೆಗಳಲ್ಲಿ ಶಿಕ್ಷಣ ಹಾಗೂ ಉದ್ಯೋಗ ಮೀಸಲಾತಿಗಾಗಿ ಶೇ.80 ರಷ್ಟು ಮೀಸಲಾತಿ ಕಲ್ಪಿಸಲಾಗಿದೆ  ಹಾಗೂ ಹೈದ್ರಾಬಾದ್ ಕರ್ನಾಟಕ ಪ್ರದೇಶ ಹೊರತುಪಡಿಸಿದ ಇತರೆ ಭಾಗದ ನೌಕರಿ ಮತ್ತು ವೃತ್ತಿ ಶಿಕ್ಷಣದಲ್ಲಿ ಈ ಭಾಗದ ಜನರಿಗಾಗಿ ಶೇ. 8 ರಷ್ಟು ಮೀಸಲಾತಿಯನ್ನು ಕಲ್ಪಿಸಲಾಗಿದೆ. ಇದರ ಲಾಭವನ್ನು ಪಡೆಯಲು ಇಲ್ಲಿಯವರೆಗೆ ಬಳ್ಳಾರಿ ಜಿಲ್ಲೆಯ ಹರಪ್ಪನಹಳ್ಳಿ, ಹೊಸಪೇಟೆ ಹಾಗೂ ಬಳ್ಳಾರಿ ಉಪ ವಿಭಾಗಗಳು ಒಟ್ಟು 1,41,877 ಅಭ್ಯರ್ಥಿಗಳಿಗೆ 371(ಜೆ) ಪ್ರಮಾಣ ಪತ್ರಗಳನ್ನು ವಿತರಿಸಲಾಗಿದೆ. ಇದರಿಂದಾಗಿ ಶಿಕ್ಷಣ ಹಾಗೂ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಮೀಸಲಾತಿಯನ್ನು ಪಡೆಯಲು ಅನುಕೂಲವಾಗಿದೆ ಎಂದರು.

 ಈ ಭಾಗದ ಜನರ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ವಿನೂತನ ಯೋಜನೆಗಳನ್ನು ಹಮ್ಮಿಕೊಂಡು ಅಭಿವೃದ್ಧಿ ಸಾಧಿಸಲು ಕಂಕಣಬದ್ಧವಾಗಿದೆ. ಆದರೆ ಕೊರೊನಾ ಮಾಹಾಮಾರಿಯಿಂದಾಗಿ ಪ್ರಗತಿಗೆ ತೊಡಕನ್ನುಂಟು ಮಾಡಿದೆ. ಆದರೂ ಸಹಿತ ನಮ್ಮ ಸರ್ಕಾರ ಕೋವಿಡ್ ಅನ್ನು ಸಮರ್ಥವಾಗಿ ನಿಯಂತ್ರಿಸುವಲ್ಲಿ ಹಲವಾರು ಕ್ರಮಗಳನ್ನು ಕೈಗೊಂಡಿದೆ ಎಂದರು.

Previous ಪಿಎಂ ಮೋದಿಯವರ 70 ನೇ ಜನ್ಮದಿನ
Next ಆಂಜನೇಯ ಸ್ವಾಮಿ ಅನುಗ್ರಹ ಮಾಡಿದಾಗ ನಾ ಮಂತ್ರಿ ಆಗುವೆ

You might also like

0 Comments

No Comments Yet!

You can be first to comment this post!

Leave a Reply