ಚೆನ್ನಮ್ಮ ವೃತ್ತದಲ್ಲಿ 300 ಕೋಟಿ ವೆಚ್ಚದಲ್ಲಿ ಫ್ಲೈಓವರ್

ಚೆನ್ನಮ್ಮ ವೃತ್ತದಲ್ಲಿ 300 ಕೋಟಿ ವೆಚ್ಚದಲ್ಲಿ ಫ್ಲೈಓವರ್

ಚೆನ್ನಮ್ಮ ವೃತ್ತದಲ್ಲಿ 300 ಕೋಟಿ ವೆಚ್ಚದಲ್ಲಿ ಫ್ಲೈಓವರ್ ನಿರ್ಮಾಣ ಕೇಂದ್ರ ಆದೇಶ – ಖುಷಿ ಹಂಚಿಕೊಂಡ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ –

ಹುಬ್ಬಳ್ಳಿ-ಧಾರವಾಡ ಅವಳಿ‌ನಗರದ ಜನತೆಯ ಬಹುದಿನಗಳ ಬೇಡಿಕೆಯಾದ ಟ್ರಾಫಿಕ್ ಐಲ್ಯಾಂಡ್ ಚೆನ್ನಮ್ಮ ವೃತ್ತದಲ್ಲಿ 300 ಕೋಟಿ ರೂಪಾಯಿ ವೆಚ್ಚದಲ್ಲಿ ಫ್ಲೈಓವರ್ ನಿರ್ಮಿಸುವುದಕ್ಕೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ
ಹುಬ್ಬಳ್ಳಿ ಜನರ ಬಹುದಿನದ ಬೇಡಿಕೆಯಾಗಿದ್ದ ಚೆನ್ನಮ್ಮ ವೃತ್ತದಲ್ಲಿ ಫ್ಲೈ ಓವರ್ ನಿರ್ಮಾಣ ಈಗ ಈಡೇರಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಖುಷಿಯನ್ನು ಹಂಚಿಕೊಂಡಿದ್ದಾರೆ.

ತಮ್ಮ ಫೆಸ್ ಬುಕ್ ಖಾತೆಯಲ್ಲಿ
ಈ ವಿಷಯ ಹಂಚಿಕೊಂಡ ಅವರು, ಈ ಭಾಗದ ಜನರ ಬೇಡಿಕೆಗೆ ಶೀಘ್ರದಲ್ಲಿ ಸ್ಪಂದಿಸಿ, ಈ ಯೋಜನೆಗೆ ಅನುಮೋದನೆ ನೀಡಿದ್ದಕ್ಕಾಗಿ ಈ ಭಾಗದ ಜನತೆಯ ಪರವಾಗಿ ಕೇಂದ್ರ ಸರ್ಕಾರಕ್ಕೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರ ಸಚಿವ ನಿತಿನ್ ಗಡ್ಕರಿ ಅವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Previous Welcome to All
Next ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ(84) ಚಿಕಿತ್ಸೆ ವಿಫಲ

You might also like

0 Comments

No Comments Yet!

You can be first to comment this post!

Leave a Reply