ಜಿಲ್ಲಾದ್ಯಂತ ಕಟ್ಟೆಚ್ಚರ ವಹಿಸಿ, ಕರೋನಾ ನಿಯಂತ್ರಿಸಿ.

ಜಿಲ್ಲಾದ್ಯಂತ ಕಟ್ಟೆಚ್ಚರ ವಹಿಸಿ, ಕರೋನಾ ನಿಯಂತ್ರಿಸಿ.

ಬೀದರ, ಮಾರ್ಚ್ 30

 ಮಹಾಮಾರಿ ಕರೋನಾ ವೈರಸ್ ವ್ಯಾಪಕ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಿ, ನಿಯಂತ್ರಿಸಬೇಕು ಎಂದು ಸಂಸದರಾದ ಭಗವಂತ ಖೂಬಾ ಅವರು ಬೀದರ ಜಿಲ್ಲೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಾ.30ರಂದು ಕರೋನಾ ಜಾಗೃತಿ ಸಮಿತಿ ಹಾಗೂ ಜಿಲ್ಲಾಮಟ್ಟದ ವೈದ್ಯಾಧಿಕಾರಿಗಳು ಇತರ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಈಗ ದಿನೇದಿನೆ ಬಿಸಿಲು ಏರುತ್ತಿರುವ ಕಾರಣ ಅಲ್ಲಲ್ಲಿ ಕುಡಿಯುವ ನೀರಿಗೆ ತೊಂದರೆಯಾಗುವ ಸಂಭವವಿದೆ. ಆದ್ದರಿಂದ ಈ ಬಗ್ಗೆ ತಯಾರಿ ಮಾಡಿಕೊಳ್ಳಬೇಕು. ವಿದೇಶಗಳಿಂದ ಆಗಮಿಸುವವರಿಗೆ ಹೆಚ್ಚಾಗಿ ಕರೋನಾ ಲಕ್ಷಣಗಳು ಕಂಡು ಬರುತ್ತಿದ್ದು ಅಂತವರ ಬಗ್ಗೆ ತೀವ್ರ ನಿಗಾ ಇಡಬೇಕು ಎಂದು ಸಂಸದರು ಹೇಳಿದ್ದಾರೆ.

ಸಾರ್ವಜನಿಕರಿಗೆ ಪಡಿತರ ಅಂಗಡಿಗಳಿAದ ವಿತರಿಸುವ ಪಡಿತರ ವಿತರಣೆಯಲ್ಲಿ ಯಾವುದೇ ತೊಂದರೆಯಾಗಬಾರದು ಮತ್ತು ವೈದ್ಯಕೀಯ ಕಿಟ್‌ಗಳು, ಸ್ಯಾನಿಟೈಜರ್ ಮತ್ತು ಮಾಸ್ಕಗಳ  ಕೊರತೆ ಕಂಡುಬAದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಗಮನಕ್ಕೆ ತಂದು ಕೂಡಲೇ ಸರಬರಾಜು ಮಾಡಲು ಕ್ರಮವಹಿಸಲಾಗುವುದು ಎಂದು ಸಂಸದರಾದ ಖುಬಾ ಅವರು ತಿಳಿಸಿದರು.

ಜಿಲ್ಲೆಯಲ್ಲಿ ಕರೋನಾ ಹರಡದಂತೆ ಜಿಲ್ಲಾಡಳಿತ, ಪೊಲೀಸ್, ಆರೋಗ್ಯ ಮತ್ತು ನಗರಸಭೆ ಮತ್ತು ಇನ್ನೀತರ ಇಲಾಖೆಗಳಿಂದ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರಿಗೆ ಅತೀ ಅವಶ್ಯವಿರುವ ತರಕಾರಿ, ದಿನಸಿ, ಹಣ್ಣಿನ ಅಂಗಡಿಗಳಿಗೆ ಮಾತ್ರ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ರೈತರಿಗೆ ಕೃಷಿ, ತೋಟಗಾರಿಕಾ ಸಾಮಗ್ರಿಗೆ ಮತ್ತು ರಸಗೊಬ್ಬರ ವಿತರಣೆಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಅನುಕೂಲ ಕಲ್ಪಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ಹೆಚ್.ಆರ್.ಮಹಾದೇವ್ ಅವರು ಸಂಸದರಿಗೆ ಮಾಹಿತಿ ನೀಡಿದರು.

Previous ಬಳ್ಳಾರಿ ಜಿಲ್ಲೆಯಲ್ಲಿ ಸೋಂಕು ಹರಡಲು ಬಿಡಬಾರದು:ಡಿಸಿಎಂ ಸವದಿ.
Next ಲಂಚ ಪಡೆದ ಸಾರಿಗೆ ಅಧಿಕಾರಿಗಳ ಅಮಾನತು.

You might also like

0 Comments

No Comments Yet!

You can be first to comment this post!

Leave a Reply