ಕೊರೊನಾ ಸೋಂಕು: ಖಚಿತಪಟ್ಟ ಮೂವರಲ್ಲಿ ಇಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ.

ಕೊರೊನಾ ಸೋಂಕು: ಖಚಿತಪಟ್ಟ ಮೂವರಲ್ಲಿ ಇಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ.

ದಾವಣಗೆರೆ ಏ.06

 2020 ರ ಮಾರ್ಚ್ 04 ರಿಂದ ಇದುವರೆಗೆ 381 ಜನರು ಜಿಲ್ಲೆಯಿಂದ ವಿದೇಶ ಪ್ರಯಾಣ ಮಾಡಿ ಬಂದಿದ್ದು, 28 ದಿನಗಳ ಅವಲೋಕನ ಅವಧಿಯನ್ನು 131 ಜನರು ಪೂರ್ಣಗೊಳಿಸಿದ್ದಾರೆ. ಹಾಗೂ 214 ಜನರು 14 ದಿನಗಳ ಅವಲೋಕನ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. ಒಟ್ಟು 24 ಜನರನ್ನು ಮನೆಯಲ್ಲೇ ಪ್ರತ್ಯೇಕವಾಗಿ ಇರಿಸಲ್ಪಟ್ಟಿದ್ದು, 35 ಜನರನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ. ಹಾಗೂ ಇದುವರೆಗೂ 34 ಜನರು ಸೂಕ್ತ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಹೊರದೇಶಗಳಲ್ಲಿ ಶಾಶ್ವತವಾಗಿ ನೆಲೆಸಿರುವ ವಿದೇಶಿಗರು ಜಿಲ್ಲೆಗೆ ಬಂದು ಮತ್ತೆ ಹೊರದೇಶಗಳಿಗೆ ಇದುವರೆಗೆ 10 ಜನರು ತೆರಳಿದ್ದಾರೆ. ವಿದೇಶಗಳಿಗೆ ಭೇಟಿ ನೀಡಿ ನಮ್ಮ ಜಿಲ್ಲೆಗೆ ಬಂದು ಇತರೆ ಜಿಲ್ಲೆಗಳಿಗೆ ಇದುವರೆಗೆ 17 ಜನ ತೆರಳಿರುತ್ತಾರೆ. ಕೊರೋನಾ ವೈರಸ್ ಪರೀಕ್ಷೆಗಾಗಿ 67 ಮಾದರಿಗಳನ್ನು ಇದುವರೆಗೆ ಕಳುಹಿಸಲಾಗಿದ್ದು, 59 ಮಾದರಿಗಳು ನೆಗೆಟಿವ್ ಎಂದು ಫಲಿತಾಂಶ ಬಂದಿರುತ್ತದೆ. ಇದುವರೆಗೂ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಖಚಿತಪಟ್ಟ ಮೂರು (03) ಪ್ರಕರಣಗಳ ಪೈಕಿ ಇಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು ಇನ್ನೊಬ್ಬರು ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.

Previous ಪ್ರತಿ ನಿತ್ಯ ಬೆಳಿಗ್ಗೆ 6ರಿಂದ 10 ಗಂಟೆಯವರೆಗೆ ಬೇಕರಿ ತೆರೆಯಲು ಅನುಮತಿ.
Next ಜಗತನ್ನು ಕಾಡುತ್ತಿರುವ ಮಹಾ ಮಾರಿ 117 ದೇಶಕ್ಕೆ ವ್ಯಾಪಿಸಿದ ವೈರಸ್.

You might also like

0 Comments

No Comments Yet!

You can be first to comment this post!

Leave a Reply