ಜಿಲ್ಲೆಯಲ್ಲಿಂದು ಹೊಸದಾಗಿ 325 ಜನರಿಗೆ ಕೊರೋನಾ ಸೋಂಕು ದೃಢ

ಜಿಲ್ಲೆಯಲ್ಲಿಂದು ಹೊಸದಾಗಿ 325 ಜನರಿಗೆ ಕೊರೋನಾ ಸೋಂಕು ದೃಢ

ಹಾಸನ –

 ಹಾಸನ ಜಿಲ್ಲೆಯಲ್ಲಿಂದು ಇಬ್ಬರು ಕೊರೋನಾ ಸೋಂಕಿನಿಂದ ಮೃತರಾಗಿದ್ದಾರೆ. ಇದರೊಂದಿಗೆ ಮೃತರ ಸಂಖ್ಯೆ 219 ಕ್ಕೆ ಏರಿಕೆಯಾಗಿದೆ. ಹೊಸದಾಗಿ 325 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 10040ಕ್ಕೆ ಏರಿಕೆಯಾಗಿದೆ. ಜಿಲ್ಲಾಸ್ಪತ್ರೆಯಲ್ಲಿ 3242 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಈವರೆಗೆ 6579 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 52 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

 ಇಂದು ಮೃತಪಟ್ಟ ಇಬ್ಬರಲ್ಲಿ ಒಬ್ಬರು ಮಂಡ್ಯ ಜಿಲ್ಲೆಯವರಾಗಿದ್ದು, 60 ವರ್ಷದ ಪುರಷರಾಗಿರುತ್ತಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ 60 ವರ್ಷದ ಮಹಿಳೆ ಉಸಿರಾಟದ ತೊಂದರೆಯಿಂದ ಚಿಕಿತ್ಸೆ ಫಲಕಾರಿಯಾಗದೆ ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇಂದು ಪತ್ತೆಯಾದ 325 ಕೊರೋನಾ ಸೋಂಕು ಪ್ರಕರಣಗಳಲ್ಲಿ 43 ಮಂದಿ ಅರಸೀಕೆರೆ ತಾಲ್ಲೂಕಿನವರಾಗಿದ್ದು, 19 ಮಂದಿ ಚನ್ನರಾಯಪಟ್ಟಣ ತಾಲ್ಲೂಕಿನವರು, ಆಲೂರು ತಾಲ್ಲೂಕಿನಲ್ಲಿ 30 ಜನ, 131 ಮಂದಿ ಹಾಸನ ತಾಲ್ಲೂಕು, 17 ಜನ ಹೊಳೆನರಸೀಪುರ ತಾಲ್ಲೂಕು, 19 ಜನ ಅರಕಲಗೂಡು ತಾಲ್ಲೂಕು, ಬೇಲೂರು ತಾಲ್ಲೂಕಿನ 36 ಜನ, ಸಕಲೇಶಪುರ ತಾಲ್ಲೂಕಿನ 27 ಜನರಿಗೆ ಹಾಗೂ ಹೊರ ಜಿಲ್ಲೆಯ 3 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ಅವರು ತಿಳಿಸಿದ್ದಾರೆ..

Previous ಗುಡಿಸಲಲ್ಲಿದ್ದ ಗುರುವಿಗೆ ಮನೆ ಕಟ್ಟಿಕೊಟ್ಟ ಹಳೆಯ ವಿದ್ಯಾರ್ಥಿಗಳು
Next ರಾಗಿಣಿ ಮತ್ತು ರವಿಶಂಕರ್ ಐಶಾರಾಮಿ ಜೀವನ್‌ ಕಂಡು ದಂಗಾದ ಸಿಸಿಬಿ ಪೊಲೀಸ್....!?

You might also like

0 Comments

No Comments Yet!

You can be first to comment this post!

Leave a Reply