ಕಲಬುರಗಿ ಜಿಮ್ಸ್ ಕೋವಿಡ್-19 ಆಸ್ಪತ್ರೆಯಾಗಿ ಕಾರ್ಯನಿರ್ವಹಣೆ: 10 ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅವಕಾಶ.

ಕಲಬುರಗಿ ಜಿಮ್ಸ್ ಕೋವಿಡ್-19 ಆಸ್ಪತ್ರೆಯಾಗಿ ಕಾರ್ಯನಿರ್ವಹಣೆ: 10 ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅವಕಾಶ.

ಕಲಬುರಗಿ.ಏ.17

 ಜಿಲ್ಲೆಯಲ್ಲಿ ಕೊರೋನಾ ಶಂಕಿತ ಮತ್ತು ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡಲು ಕಲಬುರಗಿ ಜಿಲ್ಲಾ ಆಸ್ಪತ್ರೆ (ಜಿಮ್ಸ್) ಯನ್ನು ಕೋವಿಡ್-19 ಚಿಕಿತ್ಸಾ ಆಸ್ಪತ್ರೆವೆಂದು ಗುರುತಿಸಿರುವ ಹಿನ್ನೆಲೆಯಲ್ಲಿ ಜಿಮ್ಸ್ ಆಸ್ಪತ್ರೆಗೆ ಇತರೆ ರೋಗಗಳ ಚಿಕಿತ್ಸೆಗೆ ಆಗಮಿಸುತ್ತಿದ್ದ ಸಾರ್ವಜನಿಕರು ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಾಯಿತ ಕಲಬುರಗಿಯ 10 ಆಸ್ಪತ್ರೆಗಳಲ್ಲಿ ಸಾಮಾನ್ಯ ದ್ವಿತೀಯ ಹಂತದ ಚಿಕಿತ್ಸೆಗಳನ್ನು ಪಡೆಯಬಹುದು ಎಂದು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಎ.ಜಬ್ಬಾರ್ ತಿಳಿಸಿದ್ದಾರೆ.

ಸಾಮಾನ್ಯ ದ್ವಿತೀಯ ಹಂತದ ಚಿಕಿತ್ಸಾ ಕ್ರಮಗಳು ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಒದಗಿಸಬೇಕೆಂದು ಸರ್ಕಾರದ ಆದೇಶವಿದ್ದರೂ, ಆರೋಗ್ಯ ತುರ್ತು ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ನಿಯಮವನ್ನು ಸಡಿಲಿಸಿ, ನೇರವಾಗಿ ಖಾಸಗಿ ನೋಂದಾಯಿತ ಆಸ್ಪತ್ರೆಗಳಲ್ಲಿ ಸಾರ್ವಜನಿಕರು ಪಡಿತರ ಚೀಟಿ, ಆಧಾರ್‍ಕಾರ್ಡ್ ತೋರಿಸಿ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

 ಇನ್ನೂ ಪಡಿತರ ಚೀಟಿ ಇಲ್ಲದ ರೋಗಿಗಳು ಸಹ ಮೇಲ್ಕಂಡ ನೋಂದಾಯಿತ ಖಾಸಗಿ ಆಸ್ಪತ್ರೆಗಳಿಗೆ ಹೋಗಿ ಚಿಕಿತ್ಸೆ ಪಡೆಯುವ ವ್ಯವಸ್ಥೆ ಇರಲಿದೆ. ಇಂತಹ ರೋಗಿಗಳಿಗೆ ಚಿಕಿತ್ಸೆ ಒದಗಿಸಿದ ಸಂದರ್ಭದಲ್ಲಿ ನೋಂದಾಯಿತ ಖಾಸಗಿ ಆಸ್ಪತ್ರೆಯವರು ರೋಗಿಗಳ ಚಿಕಿತ್ಸಾ ದಾಖಲೆಗಳನ್ನು ಜಿಲ್ಲಾ ಶಸ್ತ್ರಚಿಕಿತ್ಸಕರು ಹಾಗೂ ವೈದ್ಯಕೀಯ ಅಧೀಕ್ಷಕರಿಗೆ ಸಲ್ಲಿಸಿ, ಜಿಲ್ಲೆಯ ಆರೋಗ್ಯ ರಕ್ಷಾ ಸಮಿತಿಯಿಂದ ಹಣ ಮರುಪಾವತಿ ಮಾಡಿಕೊಲ್ಳಬೇಕು.

Previous ಜಿಲ್ಲೆಯಲ್ಲಿ 10 ನ್ಯಾಯಬೆಲೆ ಅಂಗಡಿಗಳ ಅಮಾನತ್ತು.
Next ಭಾರತೀಯ ವಾಯುಸೇನೆಯ ಅಪಾಚೆ ಯುದ್ಧ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ.

You might also like

0 Comments

No Comments Yet!

You can be first to comment this post!

Leave a Reply