ಪ್ರಧಾನ ಮಂತ್ರಿ ಗ್ರಾಮ್ ಸಡಕ್ ಯೋಜನೆಯಡಿ ಗ್ರಾಮಗಳ ಅಭಿವೃದ್ಧಿ

ಪ್ರಧಾನ ಮಂತ್ರಿ ಗ್ರಾಮ್ ಸಡಕ್ ಯೋಜನೆಯಡಿ ಗ್ರಾಮಗಳ ಅಭಿವೃದ್ಧಿ

ಚಿಕ್ಕಮಗಳೂರು-

 ಪ್ರಧಾನ ಮಂತ್ರಿ ಗ್ರಾಮ್ ಸಡಕ್ ಯೋಜನೆಯಡಿಯಲ್ಲಿ ಆದ್ಯತೆ ಮೇರೆಗೆ ಗ್ರಾಮಗಳನ್ನು ಗುರುತಿಸಿ ರಸ್ತೆ, ಸೇತುವೆ ಒಳಗೊಂಡಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಕು.ಶೋಭಾ ಕರಂದ್ಲಾಜೆ ಅವರು ಹೇಳಿದರು.

 ಅವರು ಇಂದು ಮೂಡಿಗೆರೆ ವಿಧಾನ ಸಭಾ ಕ್ಷೇತ್ರದಲ್ಲಿನ ನೆರಡಿ ಗ್ರಾಮದಲ್ಲಿ ಅಂಬಳೆ, ಕದ್ರಿಮಿದ್ರಿ, ತಿರುಗುಬಾಣಾ ಸಂಪರ್ಕಿಸುವ ರಸ್ತೆ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದರು. ಗ್ರಾಮಗಳ ಅಭಿವೃದ್ಧಿಗಾಗಿ ಜಿಲ್ಲೆಯಾದ್ಯಂತ ಆಯ್ದ ಗ್ರಾಮಗಳಲ್ಲಿ ಪ್ರಧಾನ ಮಂತ್ರಿ ಗ್ರಾಮ್ ಸಡಕ್ ಯೋಜನೆಯಡಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ಅದರಂತೆ ಕಳಸ ಎಸ್.ಕೆ.ಮೆಗಾಲ್ ರಸ್ತೆ, ಸೇತುವೆ ನಿರ್ಮಾಣಕ್ಕೆ ೧೦.೫೦ ಕೋಟಿ, ಬಂಕೇನಹಳ್ಳಿ, ಪಲ್ಗುಣಿ ಮೂಲಕ ಎರಕಲ್ಲು ರಸ್ತೆ ಸಂಪರ್ಕ ೭.೫೦ ಕೋಟಿ ವೆಚ್ಚದ ಕಾಮಗಾರಿಗೆ ಹಾಗೂ ಅಂಬಳೆ, ತಿರುಗುಣ, ನೆರಡಿ ರಸ್ತೆ ಸಂಪರ್ಕಕ್ಕೆ ೧೦.೫೦ ಕೋಟಿ ವೆಚ್ಚದ ಕಾಮಗಾರಿಗೆ  ಭೂಮಿ ಪೂಜೆ ನೆರವೇರಿಸಲಾಗಿದೆ ಎಮದು ಹೇಳಿದರು.

 ಕಳೆದ ಕೆಲವು ವರ್ಷಗಳಿಂದ ಯೋಜನೆಯಡಿಯಲ್ಲಿ ಯಾವುದೇ ಕಾಮಗಾರಿಗಳನ್ನು ಕೈಗೊಂಡಿರಲಿಲ್ಲ ಈದೀಗ ಹೊಸದಾಗಿ ರಸ್ತೆ,ಸೇತುವೆಗಳ ನಿರ್ಮಾಣ ಜೊತೆಗೆ ಗ್ರಾಮಗಳ ಅಭಿವೃದ್ಧಿಗೆ ಆದ್ಯತೆ ನೀಡಿದ್ದು, ಪ್ರಧಾನಮಂತ್ರಿಗಳು, ಕೇಂದ್ರ ಭೂ ಸಾರಿಗೆ ಸಚಿವರು ಸೂಕ್ತ ಅನುದಾನ ನೀಡುವ ಮೂಲಕ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದಾರೆ ಎಂದರು.

Previous ಕಸ ವಿಲೇವಾರಿಗೆ ಪ್ರತ್ಯೇಕ ಆ್ಯಪ್ ತಯಾರಿಸಿದ ಪಾಲಿಕೆ
Next ಮೈಸೂರು ತಾಲ್ಲೂಕು ಕಚೇರಿಯಲ್ಲಿ ಉಚಿತ ಕಾನೂನು ಸೇವಾ ಕೇಂದ್ರ ಸ್ಥಾಪನೆ

You might also like

0 Comments

No Comments Yet!

You can be first to comment this post!

Leave a Reply