ಜಿಲ್ಲೆಯ ಪ್ರತಿ ವ್ಯಕ್ತಿಯ ತಪಾಸಣೆ- ಪ್ರತಿ ಗ್ರಾಮದಲ್ಲಿ ಹೆಲ್ತ್ ಕ್ಯಾಂಪ್ .

ಜಿಲ್ಲೆಯ ಪ್ರತಿ ವ್ಯಕ್ತಿಯ ತಪಾಸಣೆ- ಪ್ರತಿ ಗ್ರಾಮದಲ್ಲಿ ಹೆಲ್ತ್ ಕ್ಯಾಂಪ್ .

ಹಾವೇರಿ:ಎ. 12

 ಸಮುದಾಯ ಜನರ ಆರೋಗ್ಯದ ಸ್ಥಿತಿಗತಿಗಳನ್ನು ವೈಜ್ಞಾನಿಕ ತಪಾಸಣೆಯ ಮೂಲಕ ಮಾಹಿತಿ ಸಂಗ್ರಹಿಸಲು ಇದೇ ಎಪ್ರಿಲ್ 15 ರಿಂದ ಜಿಲ್ಲೆಯಲ್ಲಿ ಮನೆ ಮನೆಗೆ ತೆರಳಿ ಆರೋಗ್ಯ ತಪಾಸಣೆ ಆರಂಭಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ ದೇಸಾಯಿ ಅವರು ತಿಳಿಸಿದ್ದಾರೆ.

 ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ತಹಶೀಲ್ದಾರ, ತಾಲೂಕಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳ ಸಭೆ ಜರುಗಿಸಿ ಕಮ್ಯೂನಿಟಿ ಹೆಲ್ತ್ ಚೆಕಪ್ ಕುರಿತಂತೆ ಚರ್ಚಿಸಿ. ಜಿಲ್ಲೆಯಲ್ಲಿ ಕರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ. ಆದಾಗ್ಯೂ ತಳಮಟ್ಟದಲ್ಲಿ ಆರೋಗ್ಯದ ಸ್ಥಿತಿಗತಿಗಳ ಮಾಹಿತಿಗಾಗಿ ಸಮುದಾಯದ ಜನರ ಆರೋಗ್ಯ ತಪಾಸಣೆಗೊಳಪಡಿಸಿ ಹೆಲ್ತ್ ರಿಪೋಟ್ ಪಡೆಯಲು ಉದ್ದೇಶಿಸಲಾಗಿದೆ. ಸಾಮಾನ್ಯ  ಅನಾರೋಗ್ಯ ವ್ಯಕ್ತಿಗಳಿಗೆ ಆಯಾ ಗ್ರಾಮದಲ್ಲೇ ಚಿಕಿತ್ಸೆ ನೀಡಲು ಹೆಲ್ತ್ ಶಿಬಿರಗಳನ್ನು ಆಯೋಜಿಸಲಾಗುವುದು. ತಪಾಸಣೆ ವೇಳೆ  ಕರೋನಾ ಲಕ್ಷಣಗಳು ಯಾವುದಾದರೂ ವ್ಯಕ್ತಿಗಳಲ್ಲಿ ಪತ್ತೆಯಾದರೆ ಅವರಿಗೆ ಸೂಕ್ತ ಚಿಕಿತ್ಸೆ ನೀಡಿ ಸಮುದಾಯಕ್ಕೆ ಹರಡುವುದನ್ನು ತಪ್ಪಿಸುವ ಮುಂಜಾಗ್ರತಾ ಕ್ರಮವಾಗಿ ಕಮ್ಯೂನಿಟಿ ಹೆಲ್ತ್‍ಚೆಕಪ್ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

Previous ಕ್ವಾರೆಂಟೈನ್ ಕೇಂದ್ರದಿಂದ 93 ಜನರ ಬಿಡುಗಡೆ.
Next ತಬ್ಲಿಘಿ ಜಮಾತ್ ಧರ್ಮಸಭೆಯಲ್ಲಿ ಭಾಗವಹಿಸಿದ್ದ ಕ್ವಾರೆಂಟೈನ್ ಕೇಂದ್ರದಿಂದ 101 ಜನರ ಬಿಡುಗಡೆ.

You might also like

0 Comments

No Comments Yet!

You can be first to comment this post!

Leave a Reply