ಸಮುದಾಯಕ್ಕೆ ಹರಡದಂತೆ ತಡೆಗಟ್ಟಲು ಸೂಚನೆ.

ಸಮುದಾಯಕ್ಕೆ ಹರಡದಂತೆ ತಡೆಗಟ್ಟಲು ಸೂಚನೆ.

ಬೆಳಗಾವಿ, ಏ.18

 ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಹೆಚ್ಚಳವಾಗಿರುವುದರಿಂದ ಯಾವುದೇ ಕಾರಣಕ್ಕೂ ಅದು ಸಮುದಾಯಕ್ಕೆ ಹರಡದಂತೆ ಕ್ರಮ ಕೈಗೊಳ್ಳಬೇಕು. ಹೆಚ್ಚು ಮಾದರಿಗಳ ಪರಿಶೀಲನೆಗೆ ಅಗತ್ಯವಿರುವ ರ್ಯಾಪಿಡ್ ಟೆಸ್ಟಿಂಗ್ ಕಿಟ್ ಗಳನ್ನು ಬೆಳಗಾವಿ ಜಿಲ್ಲೆಗೂ ಒದಗಿಸಲು ಸರ್ಕಾರದ ಮಟ್ಟದಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ತಿಳೀಸಿದ್ದಾರೆ.

ಕೋವಿಡ್ -೧೯ ನಿಯಂತ್ರಣಕ್ಕೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ನಗರದ ಪ್ರವಾಸಿಮಂದಿರದಲ್ಲಿ ಅಧಿಕಾರಿಗಳ ಜತೆ ಅವರು ಚರ್ಚೆ ನಡೆಸಿ, ಕ್ವಾರಂಟೈನ್ ಕೇಂದ್ರಗಳಲ್ಲಿ ರಾತ್ರಿ ವೇಳೆ ಕೂಡ ನಿಗಾ ವಹಿಸುವ ಮೂಲಕ ಸೋಂಕಿತರ ನಡುವೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸಾಧ್ಯವಾದರೆ ಪ್ರತ್ಯೇಕವಾಗಿ ಇರಿಸಲು ಪ್ರಯತ್ನಿಸಬೇಕು ಎಂದರು.

ಸೋಂಕಿತರ ಚಿಕಿತ್ಸೆ ವೇಳೆ ವೈದ್ಯರಿಗೆ ಅಗತ್ಯವಿರುವ ಪಿಪಿಇ ಕಿಟ್ ಗಳನ್ನು ನೇರವಾಗಿ ಖರೀದಿಸಲು ಅವಕಾಶವಿದ್ದರೆ ಪಡೆದುಕೊಳ್ಳಬಹುದು. ಕೆಲವೊಮ್ಮೆ ದಾನಿಗಳಿಂದ ಕೂಡ ಪ್ರಮಾಣೀಕೃತ ಕಿಟ್ ಗಳನ್ನು ಪಡೆದುಕೊಂಡು ಅಗತ್ಯಕ್ಕೆ ತಕ್ಕಂತೆ ಬಳಸಬಹುದು ಎಂದು ಅಧಿಕಾರಿಗಳಿಗೆ ತಿಳಿಸಿದರು. ಸೋಂಕಿತರ ಪ್ರಮಾಣ ಹೆಚ್ಚಾದಂತೆ ಸರ್ಕಾರ ಮಾರ್ಗಸೂಚಿಗಳಲ್ಲಿ ಮಾರ್ಪಾಡು ಮಾಡಲಾಗಿದ್ದು, ಆ ಪ್ರಕಾರ ಕ್ವಾರಂಟೈನ್ ಗೆ ಕ್ರಮಕೈಗೊಳ್ಳಬೇಕು.

Previous 45ಸಾವಿರ ಕುಟುಂಬಗಳಿಗೆ ಶಾಸಕ ಸೋಮಶೇಖರ್ ರೆಡ್ಡಿ ಹಾಗೂ ದಾನಿಗಳಿಂದ ರೇಷನ್ ಕಿಟ್ ವಿತರಣೆ.
Next ಲಾಕ್ ಡೌನ್ ಸಡಿಲಿಕೆ ನಿರ್ಧಾರದಿಂದ ಹಿಂದೆ ಸರಿದ ಸರ್ಕಾರ.

You might also like

0 Comments

No Comments Yet!

You can be first to comment this post!

Leave a Reply