ಕಾನೂನು ಸುವ್ಯವಸ್ಥೆ; ಸೂಕ್ತ ಕ್ರಮಕ್ಕೆ ಸಚಿವ ಜಗದೀಶ್ ಶೆಟ್ಟರ್ ಸೂಚನೆ.

ಕಾನೂನು ಸುವ್ಯವಸ್ಥೆ; ಸೂಕ್ತ ಕ್ರಮಕ್ಕೆ ಸಚಿವ ಜಗದೀಶ್ ಶೆಟ್ಟರ್ ಸೂಚನೆ.

ಬೆಳಗಾವಿ, ಏ.೪

ಲಾಕ್ ಡೌನ್ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಅಗತ್ಯ ಪೊಲೀಸ್ ಬಂದೋಸ್ತ್ ಮತ್ತಿತರ ಕ್ರಮಗಳ ಮೂಲಕ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಯಂತ್ರಿಸಬೇಕು. ಜನರಿಗೆ ದಿನಬಳಕೆ ವಸ್ತುಗಳ ಪೂರೈಕೆಯಲ್ಲಿ ಯಾವುದೇ ಅನಾನುಕೂಲ ಆಗದಂತೆ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶೆಟ್ಟರ್ ನಿರ್ದೇಶನ ನೀಡಿದ್ದಾರೆ. ಕೋವಿಡ್ ೧೯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಗರದ ಪ್ರವಾಸಿಮಂದಿರದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮೂರು ಪಾಸಿಟಿವ್ ಪ್ರಕರಣ ಕಂಡುಬಂದಿರುವುದರಿಂದ ಸೋಂಕು ಹರಡದಂತೆ ಇನ್ನಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

 ಕಾರ್ಮಿಕರು, ಅಲೆಮಾರಿಗಳು ಮತ್ತು ನಿರ್ಗತಿಕರಿಗೆ ವಸತಿ ಮತ್ತು ಊಟೋಪಹಾರದ ವ್ಯವಸ್ಥೆ ಬಗ್ಗೆ ಸಚಿವ ಶೆಟ್ಟರ್ ಮಾಹಿತಿಯನ್ನು ಪಡೆದುಕೊಂಡರು. ಕೋವಿಡ್-೧೯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕಂದಾಯ, ಆರೋಗ್ಯ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಎಲ್ಲ ಬಗೆಯ ನೆರವನ್ನು ಸರ್ಕಾರ ನೀಡಲಿದೆ.ದಿನಸಿ, ತರಕಾರಿ ಮತ್ತಿತರ ಅಗತ್ಯವಿರುವ ಸಾಮಗ್ರಿಗಳನ್ನು ಸಮರ್ಪಕವಾಗಿ ಪೂರೈಸಲು ಈಗಿರುವ ವ್ಯವಸ್ಥೆ ಮುಂದುವರಿಸುವಂತೆ ಸಚಿವರು ತಿಳಿಸಿದರು.

Previous ಆಹಾರ ಪದಾರ್ಥಗಳನ್ನು ಸದುಪಯೋಗಪಡಿಸಿಕೊಳ್ಳಿ: ಜನರಿಗೆ ಪಡಿತರ ಹಂಚಿದ ಸಚಿವ ಸಚಿವ ಸಿ.ಟಿ ರವಿ.
Next ಖಾಸಗಿ ವೈದ್ಯಕೀಯ ಸೇವೆ; ಪಾಸ್ ನೀಡಲು ನಿರ್ದೇಶನ.

You might also like

0 Comments

No Comments Yet!

You can be first to comment this post!

Leave a Reply