ಲಾಕ್ಡೌನ್ ಆದೇಶ ಉಲ್ಲಂಘನೆ: 1374 ದ್ವಿಚಕ್ರ ವಾಹನ ಜಪ್ತಿ.

ಲಾಕ್ಡೌನ್ ಆದೇಶ ಉಲ್ಲಂಘನೆ: 1374 ದ್ವಿಚಕ್ರ ವಾಹನ ಜಪ್ತಿ.

ರಾಯಚೂರು,ಏ.09.

 ಕರೋನಾ ವೈರಸ್ ಸೋಂಕನ್ನು ತಡೆಗಟ್ಟುವ ನಿಮಿತ್ತ ಈಗಾಗಲೇ ಸರ್ಕಾರ ಹೊರಡಿಸಿದ ಆದೇಶವನ್ನು ಉಲ್ಲಂಘನೆ ಮಾಡಿ, ಜಿಲ್ಲೆಯಲ್ಲಿ ಅನಾವಶ್ಯಕವಾಗಿ ರಸ್ತೆಯ ಮೇಲೆ ಸಂಚರಿಸಿದ 1,374 ದ್ವಿಚಕ್ರ ವಾಹನಗಳನ್ನು ಇದೂವರೆಗೆ ವಶಕ್ಕೆ ಪಡೆಯಲಾಗಿದೆ.

ಕೋವಿಡ್-19 ಹಿನ್ನಲೆಯಲ್ಲಿ ದೇಶಾದ್ಯಂತ ಲಾಕ್‌ಡೌನ್ ಜಾರಿಗೊಳಿಸಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿಯೂ ಲಾಕ್‌ಡೌನ್ ಜಾರಿಯಲ್ಲಿದೆ, ಸಾಂಕ್ರಾಮಿಕ ರೋಗ ಒಬ್ಬರಿಂದ ಒಬ್ಬರಿಗೆ ಹರಡುವುದನ್ನು ತಡೆಗಟ್ಟಲು ಜಿಲ್ಲಾಡಳಿತದಿಂದ ಈಗಾಗಲೇ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ರಸ್ತೆ ಮೇಲೆ ಅನತ್ಯವಾಗಿ ಸಂಚರಿಸದಂತೆಯೂ ಎಚ್ಚರಿಸಲಾಗಿದೆ. ಆದಾಗ್ಯೂ ಅದನ್ನು ಉಲ್ಲಂಘಿಸಿ ರಸ್ತೆಯಲ್ಲಿ ಅನಗತ್ಯವಾಗಿ ಸಂಚರಿಸಿದ 1,374 ಮೋಟಾರು ಸೈಕಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಹಾಗೂ 414 ಜನರ ಮೇಲೆ ಕಾನೂನು ರೀತ್ಯಾ ಕ್ರಮವನ್ನು ಕೈಗೊಳ್ಳಲಾಗಿದೆ.

ಅನಗತ್ಯ ಸಂಚಾರ ಕಂಡುಬAದಲ್ಲೀ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡು ಠಾಣೆಯಲ್ಲಿಡಲಾಗುವುದು. ಯಾವುದೇ ಕಾರಣಕ್ಕೂ ಏ14 ರ ವರೆಗೆ ವಾಹನಗಳನ್ನು ಹಸ್ತಾಂತರಿಸುವದಿಲ್ಲ. ಎಲ್ಲರನ್ನೂ ಒಂದೆಡೆ ಸೇರಿಸಿ ರಾತ್ರಿವರೆಗೂ ಇಟ್ಟುಕೊಂಡು ನಂತರ ಲಘು ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಆದ್ದರಿಂದ ಯಾರೂ ಇಂತಹ ಸಮಸ್ಯೆಗಳಿಗೆ ಎಡೆಮಾಡಿಕೊಡದೆ ಅತಿ ಅವಶ್ಯಕತೆ ಇದ್ದಾಗ ಮಾತ್ರ ಮನೆಯಿಂದ ಹೊರಗಡೆ ಬರಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಅವರು ತಿಳಿಸಿದ್ದಾರೆ.

Previous ಈ ಕೋವಿಡ್-19 ನಿಂದ ಪಾರಾಗಬಹುದಾಗಿದೆ.
Next ರಸ್ತೆ ಮೇಲೆ ಅನಗತ್ಯ ಓಡಾಡಿದರೆ ಜೈಲೇ ಗತಿ.

You might also like

0 Comments

No Comments Yet!

You can be first to comment this post!

Leave a Reply