ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆ ನಿಷೇಧ

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆ ನಿಷೇಧ

ಕೋಲಾರ-                                             

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆ ನಿμÉೀಧಿಸಿದ್ದು, ಉಲ್ಲಂಘಿಸುವವರ ವಿರುದ್ದ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಬಿ ಶಿವಸ್ವಾಮಿ ಅವರು ತಿಳಿಸಿದರು.ಇಂದು ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಮತ್ತು ಕೋಟ್ಪಾ ಅನುಷ್ಟಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಾನ್ ಮಸಾಲಾ, ತಂಬಾಕು ಜಗಿಯುವುದು ತಂಬಾಕು ಉತ್ಪನ್ನಗಳ ಮಾರಾಟದಲ್ಲಿ ಅಕ್ರಮಗಳ ಇದ್ದಲ್ಲಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೋವಿಡ್ 19 ಇರುವುದರಿಂದ ಪಾನ್ ಮಸಲಾ, ತಂಬಾಕು ಉತ್ಪನ್ನಗಳನ್ನು ಜಗಿದು ಸಾರ್ವಜನಿಕ ಸ್ಥಳಗಳಲ್ಲಿ ಉಗಿಯುವಂತಿಲ್ಲ. ಆಹಾರ ಭದ್ರತಾ ಕಾಯ್ದೆಯನ್ನು ಉಲ್ಲಂಘಿಸುವ ಹೋಟೆಲ್, ಅಂಗಡಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು. ಶಾಲಾ ಕಾಲೇಜುಗಳ ಬಳಿ 100ಮೀ ಅಂತರದಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ ಶಾಲಾ ಕಾಲೇಜು ಮಕ್ಕಳಗಳಲ್ಲಿ ತಂಬಾಕು ಉತ್ಪನ್ನಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು ಎಂದರುಸಾರ್ವಜನಿಕ ಸ್ಥಳಗಳಲ್ಲಿ ಬೀಡಿ, ಸಿಗರೇಟು, ಗುಟ್ಕಾ, ಪಾನ್ ಮಸಲಾ, ಜಗಿಯುವವರ ಮೇಲೆ ಆರೋಗ್ಯ ಮತ್ತು ಪೆÇೀಲಿಸ್ ಅಧಿಕಾರಿಗಳು ದಂಡ ವಿಧಿಸಬೇಕು ಎಂದರು.

ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರರಾದ ಮೊಹಮ್ಮದ್ ಅವರು ಮಾತನಾಡಿ, ಕಳೆದ ವರ್ಷ ಜಿಲ್ಲೆಯ 100 ಶಾಲೆಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಮಾಡಲಾಗಿದೆ. ಜಿಲ್ಲೆಯಲ್ಲಿ 63 ಶಾಲೆಗಳನ್ನು  ತಂಬಾಕು ಮುಕ್ತ ಶಾಲೆಗಳನ್ನಾಗಿ ಘೋಷಣೆ ಮಾಡಲಾಗಿದೆ. 430 ಜನರಿಗೆ ಚಿಕಿತ್ಸೆ ನೀಡಿ ತಂಬಾಕು ಚಟದಿಂದ ಬಿಡಿಸಲಾಗಿದೆ ಹಾಗೂ ರೋಸ್ ಕ್ಯಾಂಪೈನ್ ಕಾರ್ಯಕ್ರಮದ ಮೂಲಕ ಅರಿವು ಮೂಡಿಸಲಾಗಿದೆ ಎಂದು  ಮಾಹಿತಿ ನೀಡಿದರು.

Previous ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಚರ್ಚೆ
Next ಕೋರ್ಟ್ ಮೊರೆ ಹೋದ ರಾಗಿಣಿ..!

You might also like

0 Comments

No Comments Yet!

You can be first to comment this post!

Leave a Reply