ಕ್ವಾರೆಂಟೈನ್ ಕೇಂದ್ರದಿಂದ 93 ಜನರ ಬಿಡುಗಡೆ.

ಕ್ವಾರೆಂಟೈನ್ ಕೇಂದ್ರದಿಂದ 93 ಜನರ ಬಿಡುಗಡೆ.

ಚಾಮರಾಜನಗರ, ಏಪ್ರಿಲ್. 11

 ತಬ್ಲಿಘಿ ಜಮಾತ್ ಧರ್ಮಸಭೆಯಲ್ಲಿ ಭಾಗವಹಿಸಿದ್ದ 103 ಜನರ ಪೈಕಿ ನೆಗೆಟಿವ್ ವರದಿ ಬಂದಿರುವ 93 ಜನರನ್ನು ಕ್ವಾರೆಂಟೈನ್ ಕೇಂದ್ರದಿಂದ ಬಿಡುಗಡೆ ಮಾಡಲಾಗಿದೆ. ಉಳಿದ 10 ಜನರನ್ನು ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದ ಕ್ವಾರೆಂಟೈನ್ ಕೇಂದ್ರದಲ್ಲಿ ಪ್ರತ್ಯೇಕಿಸಿ ನಿಗಾವಣೆ ಮಾಡಲಾಗುತ್ತಿದೆ. ಇಂದು ಆರು ಜನರ ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯನ್ನು ಪರೀಕ್ಷೆಗಾಗಿ ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದ್ದು, ಫಲಿತಾಂಶ ನಿರೀಕ್ಷಿಸಲಾಗುತ್ತಿದೆ. ಈ ಬಗ್ಗೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ತಿಳಿಸಿದ್ದಾರೆ.

 ಕೊರೊನಾ ಪಾಸಿಟಿವ್ ವ್ಯಕ್ತಿಯು ಉದ್ಯೋಗ ಮಾಡುತ್ತಿದ್ದ ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ಜುಬಿಲಿಯೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಚಾಮರಾಜನಗರ ಜಿಲ್ಲೆಯ 52 ವ್ಯಕ್ತಿಗಳು 14 ದಿನಗಳ ಕ್ವಾರೆಂಟೈನ್ ಅವಧಿಯನ್ನು ಪೂರ್ಣಗೊಳಿಸಿರುತ್ತಾರೆ. ಈ 52 ಜನರ ಪೈಕಿ ಮೂರು ಜನರು ಪಾಸಿಟಿವ್ ವ್ಯಕ್ತಿಯ ಸಂಪರ್ಕದಲ್ಲಿದ್ದರೆಂದು ತಿಳಿದುಬಂದಿರುವುದರಿಂದ ಅವರನ್ನು ಪುನ: ಕ್ವಾರೆಂಟೈನ್ ಕೇಂದ್ರದಲ್ಲಿ ಪ್ರತ್ಯೇಕಿಸಿ ನಿಗಾವಣೆ ಮಾಡಲಾಗುತ್ತಿದೆ. ವಿದೇಶಗಳಿಂದ ಪ್ರಯಾಣಿಸಿ ಜಿಲ್ಲೆಗೆ ಇದುವರೆಗೆ ಒಟ್ಟು 43 ಜನರು ಬಂದಿದ್ದು ಇವರೆಲ್ಲರೂ ಸಹ 14 ದಿನಗಳ ಹೋಮ್ ಕ್ವಾರೆಂಟೈನ್ ಅವಧಿಯನ್ನು ಪೂರ್ಣಗೊಳಿಸಿರುತ್ತಾರೆ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ತಿಳಿಸಿದ್ದಾರೆ.

Previous ತಬ್ಲಿಘಿ ಹೋಗಿ ಬಂದವರು ಮಾಹಿತಿ ಕೊಡಿ, ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಿ.
Next ಜಿಲ್ಲೆಯ ಪ್ರತಿ ವ್ಯಕ್ತಿಯ ತಪಾಸಣೆ- ಪ್ರತಿ ಗ್ರಾಮದಲ್ಲಿ ಹೆಲ್ತ್ ಕ್ಯಾಂಪ್ .

You might also like

0 Comments

No Comments Yet!

You can be first to comment this post!

Leave a Reply