ಮಳೆಯಿಂದ ಉಂಟಾದ ನಷ್ಟದ  ಅಧ್ಯಯನ

ಮಳೆಯಿಂದ ಉಂಟಾದ ನಷ್ಟದ ಅಧ್ಯಯನ

ಮಡಿಕೇರಿ –

 ಮಡಿಕೇರಿ ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ಉಂಟಾದ ನಷ್ಟದ ಕುರಿತು ಅಧ್ಯಯನ ನಡೆಸಲು ಸೆಪ್ಟೆಂಬರ್, 08 ರಂದು ಜಿಲ್ಲೆಗೆ ಕೇಂದ್ರ ತಂಡ ಭೇಟಿ ನೀಡುವ ಹಿನ್ನೆಲೆ ಇತ್ತೀಚೆಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅವರು ಕೇಂದ್ರ ತಂಡವು ಭೂಕುಸಿತ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಲಿದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ನಿಖರ ಮಾಹಿತಿ ಒದಗಿಸಬೇಕು ಎಂದು ಅವರು ಸೂಚಿಸಿದರು. 

 ಜೀವಹಾನಿ, ರಸ್ತೆ, ಸೇತುವೆ, ನೀರಾವರಿ, ಸೆಸ್ಕ್, ಮೂಲ ಸೌಲಭ್ಯಗಳು, ಶಾಲೆ, ಅಂಗನವಾಡಿ, ಕಚೇರಿ ಕಟ್ಟಡಗಳು ಹೀಗೆ ಮಳೆ ಹಾನಿಯಾದ ಬಗ್ಗೆ ನಿಖರ ಮಾಹಿತಿ ಒದಗಿಸಬೇಕು ಎಂದು ಅವರು ಸೂಚಿಸಿದರು. ಕೂಡಿಗೆ ಸೈನಿಕ ಶಾಲೆಗೆ ಹೆಲಿಪ್ಯಾಡ್‍ಗೆ ತಂಡ ಆಗಮಿಸಲಿದ್ದು, ಸೈನಿಕ ಶಾಲೆಯಲ್ಲಿ ಮಳೆಯಿಂದ ಹಾನಿಯಾದ ನಷ್ಟದ ಬಗ್ಗೆ ಜಿಲ್ಲಾಡಳಿತದಿಂದ ಮಾಹಿತಿ ನೀಡಲಿದೆ. ಬಳಿಕ ಕಡಗದಾಳು ಬೊಟ್ಲಪ್ಪ ಪೈಸಾರಿ ಭೂಕುಸಿತ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ನಂತರ ತಲಕಾವೇರಿಯ ಗಜಗಿರಿ ಬೆಟ್ಟ ಭೂಕುಸಿತ ಪ್ರದೇಶ, ಚೇರಂಗಾಲ ರಸ್ತೆ, ಸೇತುವೆ ಹಾನಿ ಮತ್ತಿತರ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

 ಕೇಂದ್ರ ತಂಡವು ಜಿಲ್ಲೆಗೆ ಭೇಟಿ ನಂತರ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ. ಈ ನಿಟ್ಟಿನಲ್ಲಿ ಸಮರ್ಪಕ ರೀತಿಯಲ್ಲಿ ಕೇಂದ್ರ ತಂಡಕ್ಕೆ ವರದಿ ನೀಡುವುದು ಜಿಲ್ಲಾಡಳಿತ ಮತ್ತು ಸಂಬಂಧಪಟ್ಟ ಇಲಾಖಾಧಿಕಾರಿಗಳ ಅತಿ ಮುಖ್ಯ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. 

Previous ಚಂದ್ರಯಾನ-3 ಕ್ಕೆ ಮೂಹರ್ತ ಪಿಕ್ಸ್.
Next ತಂಬಾಕು ಉತ್ಪನ್ನ ಮಾರಾಟಗಾರರ ಮೇಲೆ ದಾಳಿ

You might also like

0 Comments

No Comments Yet!

You can be first to comment this post!

Leave a Reply