ಕೋವಿಡ್-19 ಪರೀಕ್ಷಿಸಿಕೊಳ್ಳಿ , ಅಪಪ್ರಚಾರಕ್ಕೆ ಕಿವಿಗೊಡಬೇಡಿ.

ಕೋವಿಡ್-19 ಪರೀಕ್ಷಿಸಿಕೊಳ್ಳಿ , ಅಪಪ್ರಚಾರಕ್ಕೆ ಕಿವಿಗೊಡಬೇಡಿ.

ಉಡುಪಿ-

ಕೋವಿಡ್-19 ಕುರಿತಂತೆ ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುವ ಅಪಪ್ರಚಾರಗಳಿಗೆ ಸಾರ್ವಜನಿಕರು  ಕಿವಿಗೊಡದೇ, ಜ್ವರ, ಶೀತ, ಕೆಮ್ಮು ಲಕ್ಷಣಗಳಿದ್ದಲ್ಲಿ ಕೂಡಲೇ ಪರೀಕ್ಷಿಸಿಕೊಳ್ಳಬೇಕು, ಆ ಮೂಲಕ ಜಿಲ್ಲೆಯಲ್ಲಿ ಸಾವಿನ ಪ್ರಮಾಣವನ್ನು ಕಡಿಮೆಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.

 ಕೋವಿಡ್-19 ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರಕಟವಾಗುವ ಸುದ್ದಿಗಳನ್ನು ನಂಬಿ, ಸಾರ್ವಜನಿಕರು ರೋಗ ಲಕ್ಷಣಗಳಿದ್ದರೂ ಕೋವಿಡ್ ಪರೀಕ್ಷೆಗೆ ಒಳಪಡುತ್ತಿಲ್ಲ, ಮನೆಯಲ್ಲಿಯೇ ಮನೆ ಮದ್ದು ಮತ್ತು ಇತರೆ ಮಾತ್ರೆಗಳನ್ನು ಪಡೆಯುತ್ತಿದ್ದು, ಇದರಿಂದ ಯಾವುದೇ ರೋಗ ಲಕ್ಷಣಗಳಿಲ್ಲದವರೂ ಮತ್ತು ರೋಗ ಲಕ್ಷಣಗಳಿರುವವರನ್ನು ಪತ್ತೆ ಹಚ್ಚಲು ಕಷ್ಟಕರವಾಗಿದ್ದು, ಇವರಿಂದ ಇತರರಿಗೆ ಹೆಚ್ಚಿನ ಸಂಖ್ಯೆಯಲ್ಲಿ ರೋಗ ಹರಡುತ್ತಿದ್ದು, ಇದರಿಂದ ಜಿಲ್ಲೆಯ ಹಿರಿಯ ವ್ಯಕ್ತಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಾವಿಗೀಡಾಗುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ವಿಷಾದ ವ್ಯಕ್ತಪಡಿಸಿದರು. 

ಜಿಲ್ಲೆಯಲ್ಲಿ ಇದುವರೆಗೆ 12149 ಮಂದಿ ಕೋವಿಡ್  ಸೋಂಕಿತರಾಗಿದ್ದು , 105 ಮಂದಿ ಮರಣಹೊಂದಿದ್ದು, 55 ರಿದ 64  ವಯೋಮಿತಿಯ  1315 ಸೋಂಕಿತರಲ್ಲಿ 25 ಮಂದಿ ಮತ್ತು 65 ವರ್ಷ ಮೇಲ್ಪಟ್ಟ 1161 ಕೋವಿಡ್  ಸೋಂಕಿತರಲ್ಲಿ 51 ಮಂದಿ ಮರಣಹೊಂದಿದ್ದಾರೆ. ಸಾರ್ವಜನಿಕರು  ಜ್ವರ, ಶೀತ, ಕೆಮ್ಮು ಲಕ್ಷಣಗಳಿದ್ದಲ್ಲಿ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳುವುದರಿಂದ ಹಿರಿಯ ಜೀವಗಳನ್ನು ಉಳಿಸಲು ಸಾಧ್ಯವಿದೆ ,  ರೋಗಲಕ್ಷಣಗಳಿದ್ದು ಮನೆಯಲ್ಲಿಯೇ ಇದ್ದು , ಕೊನೆಯ ಸಮಯದಲ್ಲಿ ಆಸ್ಪತ್ರೆಗೆ ಬಂದರೆ ಚಿಕಿತ್ಸೆ ನೀಡುವುದು ಕಷ್ಟವಾಗಲಿದೆ ಎಂದು ಡಿಸಿ ಹೇಳಿದರು.

ಕೋವಿಡ್ ಸೋಂಕಿತರ ಪ್ರಾಥಮಿಕ ಸಂಪರ್ಕಿತರು ಪರೀಕ್ಷೆಗೆ ನಿರಾಕರಿಸಿದರೆ ಅವರ ವಿರುದ್ದ ಎಪಿಡಮಿಕ್ ಕಾಯ್ದೆಯನ್ವಯ ಪ್ರಕರಣ ದಾಖಲಿಸುವುದಾಗಿ ಎಚ್ಚರಿಸಿದ ಜಿಲ್ಲಾದಿಕಾರಿ ಜಿ.ಜಗದೀಶ್, ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುವವರ ಕುರಿತು ಸಹ ಕ್ರಮ ಕೈಗೊಳ್ಳಲಾಗುವುದು , ಈಗಾಗಲೇ 3 ಮಂದಿಯ ವಿರುದ್ದ ಎಫ್.ಐ.ಆರ್. ದಾಖಲಿಸಿದೆ ಎಂದರು.

ಕೋವಿಡ್ -19 ರೋಗಿಗಳಿಗೆ ಎಪಿಲ್ . ಬಿಪಿಎಲ್ ಭೇಧವಿಲ್ಲದೇ ಆಯುಷ್ಮಾನ್ ಭಾರತ್ ಯೋಜನೆಯಡಿ ಸಂಪೂರ್ಣ ಉಚಿತ ಚಿಕಿತ್ಸೆ ನೀಡುತ್ತಿದ್ದು, ಜಿಲ್ಲಾಡಳಿತದ ರೆಫರಲ್ ಪಡೆಯದೇ  ನೇರವಾಗಿ ಖಾಸಗಿ ಆಸ್ಪತೆಗಳಿಗೆ ದಾಖಲಾಗಿ, ವಿಶೇಷ ವಾಡ್ ð ಸೌಲಭ್ಯ ಪಡೆಯುವವರು ಮಾತ್ರ ಬಿಲ್ ಭರಿಸಬೇಕಿದೆ , ಜಿಲ್ಲೆಯ ಆಸ್ಪತ್ರೆಗಳಲ್ಲಿ  ಕೋವಿಡ್ ಚಕಿತ್ಸೆಗಾಗಿ ಸಾಕಷ್ಟು ಸಂಖ್ಯೆಯ ಬೆಡ್ ಗಳು ಲಭ್ಯವಿವೆ ಎಂದು ಡಿಸಿ ಸ್ಪಷ್ಟಪಡಿಸಿದರು.

ಜಿಲ್ಲೆಯಲ್ಲಿ ಕೋವಿಡ್ -19 ಚಕಿತ್ಸೆಗೆ ಐ.ಸಿ.ಯು ಗಳು ಭರ್ತಿಯಾಗಿದ್ದು, ಖಾಸಗಿ ಅಸ್ಪತ್ರೆಗಳಲ್ಲಿ ನಿಗಧಿತ ಸಂಖ್ಯೆಯ ಐ.ಸಿ.ಯು ಬೆಡ್‌ಗಳನ್ನು ಒದಗಿಸುವಂತೆ ಕೋರಲಾಗಿದೆ, ಸಾರ್ವಜನಿಕರು ಅಪಪ್ರಚಾರಕ್ಕೆ ಕಿವಿಗೊಡದೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಶಾಸಕ ರಘುಪತಿಭಟ್ ಹೇಳಿದರು.

Previous ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿದ ಜಿ.ಪಂ. ಅಧ್ಯಕ್ಷೆ
Next ರಾಗಿಣಿಗೂ ಬಿಜೆಪಿಗೂ ಸಂಬಂಧ ‌ಇಲ್ಲಾ.

You might also like

0 Comments

No Comments Yet!

You can be first to comment this post!

Leave a Reply