ಕೊರೋನ ನಿಯಂತ್ರಣದಲ್ಲಿ ಜಿಲ್ಲಾಡಳಿತದ ಕಾರ್ಯ ಶ್ಲಾಘನೀಯ: ಎಸ್.ಆರ್.ಉಮಾಶಂಕರ್.

ಕೊರೋನ ನಿಯಂತ್ರಣದಲ್ಲಿ ಜಿಲ್ಲಾಡಳಿತದ ಕಾರ್ಯ ಶ್ಲಾಘನೀಯ: ಎಸ್.ಆರ್.ಉಮಾಶಂಕರ್.

ದಾವಣಗೆರೆ ಏ.03

 ಜಿಲ್ಲೆಯಲ್ಲಿ ಕೊರೊನಾ ವೈರಸ್ ನಿಯಂತ್ರಣ ಹಾಗೂ ಲಾಕ್‍ಡೌನ್ ಹಿನ್ನೆಲೆಯಲ್ಲಿ ಅಗತ್ಯವಸ್ತುಗಳ ಲಭ್ಯತೆ ಸೇರಿದಂತೆ ಜನಜೀವನ ಸುಗಮವಾಗಿ ನಡೆಯಲು ಆರಂಭದಿಂದಲೂ ಪರಿಣಾಮಕಾರಿಯಾಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಯ ಕಾರ್ಯ ರಾಜ್ಯಕ್ಕೆ ಮಾದರಿಯಾಗಿದ್ದು, ಇನ್ನು ಮುಂದೆ ಜಿಲ್ಲೆಯಲ್ಲಿ ಒಂದೂ ಪಾಸಿಟಿವ್ ಪ್ರಕರಣ ಬಾರದಿರಲಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಎಸ್.ಆರ್.ಉಮಾಶಂಕರ್ ಆಶಿಸಿದರು.

 ಜಿಲ್ಲಾಡಳಿತ ಭವನದ ಕೋವಿಡ್ 19 ವೈರಾಣು ನಿಯಂತ್ರಣ ಕುರಿತು ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಪರಿಶೀಲನೆ ನಡೆಸಲು ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಈ ಹಿಂದೆ ಆರ್‍ಓ ಪ್ಲಾಂಟ್ ಬಂದಾಗಿನಿಂದ ವೈದ್ಯರಿಗೆ ಕೆಲಸ ಕಡಿಮೆಯಾಗಿತ್ತು. ಇದೇ ರೀತಿ ಕೋವಿಡ್ ನಿಯಂತ್ರಣ ಯಶಸ್ವಿಯಾದಲ್ಲಿ ಜಿಲ್ಲೆಯ ವೈದ್ಯರ ಮೇಲಿನ ಒತ್ತಡ ಕಡಿಮೆಯಾಗಿ, ಅವರ ಸೇವೆಯನ್ನು ಇತರೆ ಜಿಲ್ಲೆಗಳಲ್ಲಿ ಬಳಸಿಕೊಳ್ಳಬಹುದೆಂದರು.

 ಪ್ರಸ್ತುತ ಜಿಲ್ಲೆಯಲ್ಲಿರುವ 3 ಪಾಸಿಟಿವ್ ಪ್ರಕರಣಗಳ ಸೋಂಕಿತರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಚಿಕಿತ್ಸಾ ಅವಧಿಯಲ್ಲಿಯಲ್ಲಿನ ಪ್ರಾಥಮಿಕ ಹಂತದ ಗಂಟಲು ಮಾದರಿ ಪರೀಕ್ಷೆಯಲ್ಲಿ ಈ ಮೂವರು ಸೋಂಕಿತರ ಫಲಿತಾಂಶ ನೆಗೆಟಿವ್ ಎಂದು ಬಂದಿರುವುದು ಸಂತಸದ ವಿಷಯವಾಗಿದ್ದು ಮುಂದೆ ಜಿಲ್ಲೆಯಲ್ಲಿ ಒಂದೂ ಪಾಸಿಟಿವ್ ಪ್ರಕರಣ ವರದಿಯಾಗುವುದು ಬೇಡವೆಂದು ಹೇಳಿದರು.

Previous ಗ್ರಾಮೀಣ ಪ್ರದೇಶಗಳಲ್ಲಿ ತಾಜಾ ಹಣ್ಣು, ತರಕಾರಿ ಮಾರಾಟಕ್ಕೆ ಅವಕಾಶ.
Next ಹೋಂ ಕ್ವಾರಂಟೈನ್ ನಿಯಮ ಉಲ್ಲಂಘಣೆ: ನಾಲ್ವರ ವಿರುದ್ದ ಪ್ರಕರಣ ದಾಖಲು.

You might also like

0 Comments

No Comments Yet!

You can be first to comment this post!

Leave a Reply