ತಬ್ಲಿಘಿ ಜಮಾತ್ ಧರ್ಮಸಭೆಯಲ್ಲಿ ಭಾಗವಹಿಸಿದ್ದ ಕ್ವಾರೆಂಟೈನ್ ಕೇಂದ್ರದಿಂದ 101 ಜನರ ಬಿಡುಗಡೆ.

ತಬ್ಲಿಘಿ ಜಮಾತ್ ಧರ್ಮಸಭೆಯಲ್ಲಿ ಭಾಗವಹಿಸಿದ್ದ ಕ್ವಾರೆಂಟೈನ್ ಕೇಂದ್ರದಿಂದ 101 ಜನರ ಬಿಡುಗಡೆ.

ಚಾಮರಾಜನಗರ, ಏಪ್ರಿಲ್. 12

 ತಬ್ಲಿಘಿ ಜಮಾತ್ ಧರ್ಮಸಭೆಯಲ್ಲಿ ಭಾಗವಹಿಸಿದ್ದ 103 ಜನರ ಪೈಕಿ ನೆಗೆಟಿವ್ ವರದಿ ಬಂದಿರುವ 101 ಜನರನ್ನು ಕ್ವಾರೆಂಟೈನ್ ಕೇಂದ್ರದಿಂದ ಬಿಡುಗಡೆ ಮಾಡಲಾಗಿದೆ. ಉಳಿದ ಇಬ್ಬರನ್ನು ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದ ಕ್ವಾರೆಂಟೈನ್ ಕೇಂದ್ರದಲ್ಲಿ ಪ್ರತ್ಯೇಕಿಸಿ ನಿಗಾವಣೆ ಮಾಡಲಾಗುತ್ತಿದೆ.

 ಕೊರೊನಾ ಪಾಸಿಟಿವ್ ವ್ಯಕ್ತಿಯು ಉದ್ಯೋಗ ಮಾಡುತ್ತಿದ್ದ ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ಜುಬಿಲಿಯೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಚಾಮರಾಜನಗರ ಜಿಲ್ಲೆಯ 52 ವ್ಯಕ್ತಿಗಳು 14 ದಿನಗಳ ಕ್ವಾರೆಂಟೈನ್ ಅವಧಿಯನ್ನು ಪೂರ್ಣಗೊಳಿಸಿರುತ್ತಾರೆ. ಈ 52 ಜನರ ಪೈಕಿ ಮೂರು ಜನರು ಪಾಸಿಟಿವ್ ವ್ಯಕ್ತಿಯ ಸಂಪರ್ಕದಲ್ಲಿದ್ದರೆಂದು ತಿಳಿದುಬಂದಿರುವುದರಿಂದ ಅವರನ್ನು ಪುನ: ಕ್ವಾರೆಂಟೈನ್ ಕೇಂದ್ರದಲ್ಲಿ ಪ್ರತ್ಯೇಕಿಸಿ ನಿಗಾವಣೆ ಮಾಡಲಾಗುತ್ತಿದೆ. ಇಂದು ಈ ಮೂವರ ಹಾಗೂ ಮಳವಳ್ಳಿ ಪಾಸಿಟಿವ್ ಪ್ರಕರಣದ ಜೊತೆ ಸಂಪರ್ಕ ಹೊಂದಿದ್ದ ಒಬ್ಬ ವ್ಯಕ್ತಿಯ ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯನ್ನು ಪರೀಕ್ಷೆಗಾಗಿ ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ. ಸದರಿ ವ್ಯಕ್ತಿಯನ್ನು ಸಹ ಕ್ವಾರೆಂಟೈನ್ ಕೇಂದ್ರದಲ್ಲಿ ಪ್ರತ್ಯೇಕಿಸಿ ನಿಗಾವಣೆ ಮಾಡಲಾಗುತ್ತಿದೆ.

ಒಟ್ಟಾರೆ ಇಂದು ನಾಲ್ಕು ಜನರ ಮಾದರಿಗಳನ್ನು ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಫಲಿತಾಂಶ ನಿರೀಕ್ಷಿಸಲಾಗುತ್ತಿದೆ. ಈ ಬಗ್ಗೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ತಿಳಿಸಿದ್ದಾರೆ.

Previous ಬಸ್ನಲ್ಲಿ ಸೋಂಕಿತ ವ್ಯಕ್ತಿ ಸಂಚಾರ. ಪ್ರಯಾಣಿಕರು ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಿ.
Next ರೋಗಿಗೆ ನೆರವಾಗಿ ಮಾನವೀಯತೆ ಮೆರೆದ ಕಲಬುರಗಿ ಕೊರೋನಾ ವಾರಿಯರ್ಸ್.

You might also like

0 Comments

No Comments Yet!

You can be first to comment this post!

Leave a Reply