ತಂಬಾಕು ಉತ್ಪನ್ನ ಮಾರಾಟಗಾರರ ಮೇಲೆ ದಾಳಿ

ತಂಬಾಕು ಉತ್ಪನ್ನ ಮಾರಾಟಗಾರರ ಮೇಲೆ ದಾಳಿ

ಚಿಕ್ಕಮಗಳೂರು-

 ಜನರ ಆರೋಗ್ಯದ ಹಿತ ದೃಷ್ಟಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುವುದು ಮತ್ತು ಬಳಸುವುದನ್ನು ನಿಷೇಧಿಸಲಾಗಿದೆ.ಆದಾಗ್ಯೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಪಾನ್‌ಮಸಾಲ, ಜರ್ದಾ, ಖೈನಿ, ಇತ್ಯಾದಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುತ್ತಾರೆ.

 ಈ ಹಿನ್ನಲೆಯಲ್ಲಿ ಸೆಪ್ಟೆಂಬರ್ ೦೫ ರಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮತ್ತು ಕಡೂರು ತಾಲ್ಲೂಕಿನ ಜಿಲ್ಲಾ ತನಿಖಾ ದಳದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಬೀರೂರು ನಗರದ ಬಿ.ಹೆಚ್ ರಸ್ತೆಯ ಮಹಾತ್ಮಗಾಂಧಿ ವೃತ್ತದ  ಸುತ್ತಮುತ್ತ  ಖಾಸಗಿ ಬಸ್ ನಿಲ್ದಾಣ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಎದರು, ರೈಲ್ವೆ ನಿಲ್ದಾಣ ಸುತ್ತಮುತ್ತ ವ್ಯಾಪ್ತಿಯಲ್ಲಿನ ಅಂಗಡಿ ಮುಂಗಟ್ಟು, ಹೋಟೆಲ್, ಬಾರ್ ಆಂಡ್ ರೆಸ್ಟೋರೆಂಟ್, ಪಾನ್ ಶಾಪ್, ಪ್ರಾವಿಜನ್ ಸ್ಟೋರ್‍ಸ್, ಬೇಕರಿ ಸೇರಿದಂತೆ ವಿವಿಧ ಮಳಿಗೆಗಳ ಮೇಲೆ ದಾಳಿ ನಡೆಸಿ (ಜಾಹೀರಾತು ನಿಷೇಧ, ವ್ಯಾಪಾರ ವಹಿವಾಟು, ಉತ್ಪಾದನೆ, ಸಾಗಣೆ, ವಿತರಣೆ) ಅಧಿನಿಯಮ -೨೦೦೩ರ (ಕೋಟ್ಪಾ) ಅಡಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಇನ್ನಿತರ ಉಲ್ಲಂಘನೆಯ ವಿರುದ್ದ ಕ್ರಮ ಜರುಗಿಸಿ ಒಟ್ಟು ೪೦ ಪ್ರಕರಣಗಳನ್ನು ದಾಖಲಿಸಿ ೫,೬೫೦/-  ರೂಪಾಯಿಗಳ ದಂಡ ವಿಧಿಸಿದೆ.

 ಇದೇ ವೇಳೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ದಿನೇಶ್ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಪಾನ್‌ಮಸಾಲ, ಜರ್ದಾ, ಖೈನಿ, ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದು ಜೊತೆಗೆ ಸಾಂಕ್ರಾಮಿಕ ರೋಗಗಳಾದ ಕ್ಷಯರೋಗ, ನ್ಯುಮೋನಿಯ ಮತ್ತು ಕೋವಿಡ್-೧೯ ವೈರಸ್ ಒಬ್ಬರಿಂದ ಮತ್ತೊಬ್ಬರಿಗೆ ಹರಡಲು ಕಾರಣವಾಗಬಹುದು. ಬೀಡಿ-ಸಿಗರೇಟ್ ಸೇದುವುದರಿಂದ ಕೈಯಿಂದ ಬಾಯಿಗೆ ವೈರಸ್‌ಗಳು ಮಾನವನ ದೇಹವನ್ನು ಪ್ರವೇಶಿಸುವ ಸಾಧ್ಯತೆ ಇರುವುದರಿಂದ ಹಾಗೂ ದೇಹದ ಇತರೆ ಭಾಗಗಳಿಗೆ ಸೋಂಕು ಹರಡಿ ಶ್ವಾಸಕೋಶ, ಹೃದಯ ಸಂಬಂಧಿತ ಕಾಯಿಲೆಗಳು ಬರಬಹುದು ಎಂದು ತಿಳಿಸಿದರು.

Previous ಮಳೆಯಿಂದ ಉಂಟಾದ ನಷ್ಟದ ಅಧ್ಯಯನ
Next ಉತ್ತರ ಭಾರತದ ನಟಿಯರಿಂದ, ಕನ್ನಡ ಚಿತ್ರರಂಗಕ್ಕೆ ಕೆಟ್ಟ ಹೆಸರು - ಜಗ್ಗೇಶ್

You might also like

0 Comments

No Comments Yet!

You can be first to comment this post!

Leave a Reply