ಮಾದಕ ದ್ರವ್ಯಗಳ ವಿರುದ್ಧ ಜಿಲ್ಲಾ ಪೊಲೀಸ್ ಇಲಾಖೆಯಿಂದ ಜಾಗೃತಿ

ಮಾದಕ ದ್ರವ್ಯಗಳ ವಿರುದ್ಧ ಜಿಲ್ಲಾ ಪೊಲೀಸ್ ಇಲಾಖೆಯಿಂದ ಜಾಗೃತಿ

ಹಾವೇರಿ-

ಸಮಾಜಕ್ಕೆ ಮಾರಕವಾಗಿರುವ ಮಾದಕ ದ್ರವ್ಯಗಳ ಸೇವನೆ, ಮಾರಾಟದ ವಿರುದ್ಧ ಯುದ್ಧದ ಮಾದರಿಯಲ್ಲಿ ಹೋರಾಟ ಮಾಡಬೇಕಾಗಿದೆ.  ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಜಾಗೃತಿ ಕಾರ್ಯಕ್ರಮಗಳ ಮೂಲಕ ಮಾದಕ ವಸ್ತುಗಳ ತೊಡೆಯಲು ಪಣತೊಟ್ಟಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ತಿಳಿಸಿದ್ದಾರೆ.

ಮಾದಕ ವಸ್ತುಗಳ ಮೇಲೆ ಯುದ್ಧ ಎಂಬ ಘೋಷಣೆಯೊಂದಿಗೆ ಹಾವೇರಿ ನಗರದಲ್ಲಿ ಸೋಮವಾರ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಲಾದ ಜಾಗೃತಿ ಬೈಕ್ ರ್ಯಾಲಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ ಅವರು ನಗರದ ಹೊಸಮನಿ ಸಿದ್ಧಪ್ಪ ವೃತ್ತದಲ್ಲಿ ಹಸಿರು ನಿಶಾನೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಚಾಲನೆ ನೀಡಿದರು.

ಡಿವೈಎಸ್‍ಪಿ ವಿಜಯಕುಮಾರ ಸಂತೋಷ್ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಬೈಕ್ ಹಾಗೂ ಜೀಪ್‍ಗಳಲ್ಲಿ ನಗರ ಸಂಚಾರ ಕೈಗೊಂಡು ಯುವಜನರಿಗೆ ಮಾರಕವಾಗಿರುವ ಮಾದಕ ವಸ್ತುಗಳ ಸೇವನೆಯನ್ನು ಕೈಬಿಡಿ-ಮಾದಕ ವಸ್ತುಗಳ ಪತ್ತೆಗಾಗಿ ಪೊಲೀಸರೊಂದಿಗೆ ಕೈಜೋಡಿಸಿ ಎಂಬ ಘೋಷವಾಕ್ಯಗೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿದರು.

ಇದೇ ಸಂದರ್ಭದಲ್ಲಿ ಕೋವಿಡ್-19 ಮಾರಕ ಸೋಂಕು ತಡೆಗೆ ಕಡ್ಡಾಯವಾಗಿ ಸಾರ್ವಜನಿಕವಾಗಿ ಓಡಾಡುವಾಗ ಮಾಸ್ಕ್‍ಗಳನ್ನು ಧರಿಸಬೇಕು, ಸಾಮಾಜಿಕ ಅಂತರಕಾಯ್ದುಕೊಳ್ಳಬೇಕು. ನಿಯಮಿತವಾಗಿ ಕೈ-ಬಾಯಿ ಸ್ವಚ್ಛತೆ ಹಾಗೂ  ಸ್ಯಾನಿಟೈಸರ್ ಮಾಡಿಕೊಳ್ಳುವಂತೆ ಅರಿವು ಮೂಡಿಸಿದರು. ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರ ರಕ್ಷಣೆಗಾಗಿ ಪೊಲೀಸ್‍ರ ಸಂಪರ್ಕಕ್ಕಾಗಿ ಹೊಸದಾಗಿ ಜಾರಿಗೆ ಬಂದಿರುವ 112 ಸಹಾಯವಾಣಿ ಸಂಖ್ಯೆ ಕುರಿತಂತೆ ಈ ಸಂದರ್ಭದಲ್ಲಿ ಪ್ರಚಾರಕೈಗೊಂಡರು.

Previous ಬಡವರಿಗೆ ಮನೆಗಳನ್ನು ನೀಡುವುದು ನನ್ನ ಉದ್ದೇಶ.
Next ಕುರಿ ಸಾಕಾಣಿಕೆ ರೈತರ ಪಾಲಿಗೆ ಬ್ಯಾಂಕ್‍ನಲ್ಲಿ ಹಣ ಇದ್ದಹಾಗೆ

You might also like

0 Comments

No Comments Yet!

You can be first to comment this post!

Leave a Reply