ಕೋವಿಡ್-19 ನಿಯಂತ್ರಣ ಮತ್ತು ಮಳೆ ಹಾನಿ ಬಗ್ಗೆ ಮಾಹಿತಿ ಪಡೆದ ಸಿಎಂ

ಕೋವಿಡ್-19 ನಿಯಂತ್ರಣ ಮತ್ತು ಮಳೆ ಹಾನಿ ಬಗ್ಗೆ ಮಾಹಿತಿ ಪಡೆದ ಸಿಎಂ

ಮಡಿಕೇರಿ-

 ರಾಜ್ಯಾದ್ಯಂತ ಕೋವಿಡ್-19 ಸೋಂಕು ಹರಡುವಿಕೆ ಪ್ರಮಾಣ ಕಡಿಮೆ ಮಾಡಲು ಮತ್ತು ಕೋವಿಡ್ ಮರಣ ಪ್ರಕರಣಗಳ ಪ್ರಮಾಣ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸೂಚನೆ ನೀಡಿದ್ದಾರೆ.   

 ಬೆಂಗಳೂರಿನಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ಗುರುವಾರ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಕೋವಿಡ್-19 ನಿಯಂತ್ರಣ ಹಾಗೂ ಮಳೆ ಹಾನಿ ಸಂಬಂಧ ಸಭೆ ನಡೆಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿದರು. ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿವೆ. ಅಲ್ಲದೆ ಜಿಲ್ಲಾಡಳಿತ ಸೋಂಕು ನಿಯಂತ್ರಿಸುವ ಸಲುವಾಗಿ ಹಗಲಿರುಳು ಶ್ರಮ ವಹಿಸುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಕಾರ್ಯ ವೈಖರಿ ಬಗ್ಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.  

 ಈಗಾಗಲೇ ಅನ್‍ಲಾಕ್ ಪ್ರಕ್ರಿಯೆಯಿಂದ ಆರ್ಥಿಕ ಚಟುವಟಿಕೆ ಆರಂಭಿಸಲಾಗಿದೆ. ಕೋವಿಡ್-19 ಜೊತೆಗೆ ಬದುಕು ನಡೆಸುವ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಕಾರ್ಯನಿರ್ವಹಿಸಬೇಕು. ಕೋವಿಡ್-19 ನಿಂದ ಉಂಟಾಗುತ್ತಿರುವ ಮರಣ ಪ್ರಮಾಣ ತಗ್ಗಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಶ್ರಮವಹಿಸಿ ಎಂದು ಮುಖ್ಯಮಂತ್ರಿ ಅವರು ರಾಜ್ಯದ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

 ಅಲ್ಲದೇ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ಪ್ರವಾಹ ನಿರ್ವಹಣೆ ಸಂಬಂಧ ಹೆಚ್ಚಿನ ಮುತುವರ್ಜಿಯಿಂದ ಕೆಲಸ ನಿರ್ವಹಿಸಿ. ಮಳೆಯಿಂದ ಮನೆ, ಜೀವ ಹಾನಿ ಸಂಭವಿಸಿದ್ದಲ್ಲಿ ನಿಯಮಾನುಸಾರ ಪರಿಹಾರ ನೀಡಿ. ಈಗಾಗಲೇ ಜಿಲ್ಲಾಧಿಕಾರಿಗಳ ಪಿಡಿ ಖಾತೆಗೆ ಹಣ ಬಿಡುಗಡೆ ಮಾಡಲಾಗಿದ್ದು, ಪರಿಹಾರ, ರಸ್ತೆ ಸೇತುವೆ ಮುಂತಾದವುಗಳ ದುರಸ್ತಿ ಮತ್ತು ಮರುನಿರ್ಮಾಣ ಕಾರ್ಯವನ್ನು ಕ್ಷಿಪ್ರಗತಿಯಲ್ಲಿ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚಿಸಿದರು.

Previous ಆಪ್ತ ಸಮಾಲೋಚನೆ ಮೂಲಕ ಆತ್ಮಹತ್ಯೆ ತಡೆಗಟ್ಟಲು ಸಾಧ್ಯ
Next ಕೃಷಿ ಉತ್ಪನ್ನಗಳ ಮಾರುಕಟ್ಟೆ ಶುಲ್ಕ ನಿಗಧಿ

You might also like

0 Comments

No Comments Yet!

You can be first to comment this post!

Leave a Reply