60 ಲಕ್ಷ ವೆಚ್ಚದಲ್ಲಿ ಶಾಲಾ ಕೊಠಡಿಗಳ ನಿರ್ಮಾಣ

60 ಲಕ್ಷ ವೆಚ್ಚದಲ್ಲಿ ಶಾಲಾ ಕೊಠಡಿಗಳ ನಿರ್ಮಾಣ

ಬಳ್ಳಾರಿ-

2019-20ನೇ ಸಾಲಿನ ಡಿ.ಎಂ.ಎಫ್ ಯೋಜನೆ ಅಡಿಯಲ್ಲಿ ಮಂಜೂರಾದ ಹೊಸಪೇಟೆ ನಗರದ ಟಿ.ಬಿ.ಡ್ಯಾಂನ ಸರಕಾರಿ ಪ್ರೌಡಶಾಲೆಯಲ್ಲಿ 6 ಕೊಠಡಿಗಳ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆಯನ್ನು ನೆರವೇರಿಸಲಾಯಿತು.ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗ ಇಲಾಖೆಯಿಂದ ನಿರ್ಮಿಸಲಾಗುತ್ತಿರುವ 60 ಲಕ್ಷ ವೆಚ್ಚ ಕಾಮಗಾರಿಗಳ ಭೂಮಿ ಪೂಜೆಯನ್ನು ನಗರದ ಟಿ.ಬಿ ಡ್ಯಾಂನ ಸರ್ಕಾರಿ ಪ್ರೌಡ ಶಾಲೆಯಲ್ಲಿ ಬುಧವಾರ ನೆರವೇರಿಸಲಾಗಿದೆ.ಈ ಸಂದರ್ಭದಲ್ಲಿ ಹುಡಾ ಅಧ್ಯಕ್ಷರಾದ ಅಶೋಕ್ ಜೀರೆ ಸೇರಿದಂತೆ ಸಚಿವರ ಆಪ್ತ ಸಹಾಯಕ ಧರ್ಮೇಂದ್ರ ಸಿಂಗ್, ಮಾಜಿ ಹುಡಾ ಅಧ್ಯಕ್ಷ ಅಯ್ಯಾಳಿ ತಿಮ್ಮಪ್ಪ, ಕವಿತಾ ಸಿಂಗ್, ಸಂದೀಪ್ ಸಿಂಗ್ ಹಾಗೂ ಶಾಲಾ ಆಡಳಿತ ಮಂಡಳಿಯ ಸದಸ್ಯರು ಭಾಗಿಯಾಗಿದ್ದರು.

Previous ಜಿಲ್ಲೆಯಲ್ಲಿಯೇ ಮೊದಲ ಸ್ಕೇಟಿಂಗ್ ಅಂಕಣ ನಿರ್ಮಾಣ
Next ತುಂಬಿ ಹರಿಯುತ್ತಿರುವ ನದಿಯಲ್ಲಿ ಯುವಕರ ಹುಚ್ಚಾಟ

You might also like

0 Comments

No Comments Yet!

You can be first to comment this post!

Leave a Reply