ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಸಭೆ; ಅಸಂಘಟಿತ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಲು ಸೂಚನೆ.

ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಸಭೆ; ಅಸಂಘಟಿತ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಲು ಸೂಚನೆ.

ಬೆಳಗಾವಿ, ಮಾ.೩೧

ಜಿಲ್ಲೆಯಲ್ಲಿ ಇರುವ ಅಸಂಘಟಿತ ವಲಯದ ಕಾರ್ಮಿಕರ ಪಟ್ಟಿ ಮಾಡಿ ಸ್ವಯಂಸೇವಾ ಸಂಘ-ಸಂಸ್ಥೆಗಳ ನೆರವಿನಿಂದ ಅವರಿಗೆ ಊಟೋಪಹಾರದ ವ್ಯವಸ್ಥೆ ಮಾಡಬೇಕು. ಅದೇ ರೀತಿ ಇಟ್ಟಿಗೆ ಭಟ್ಟಿ, ಸವಿತಾ ಸಮಾಜ, ಕಟ್ಟಡ ಕಾರ್ಮಿಕರು, ವಲಸೆ ಕಾರ್ಮಿಕರು, ನಿರ್ಗತಿಕರನ್ನು ಗುರುತಿಸಿ ಸೌಲಭ್ಯ ಒದಗಿಸಬೇಕು ಎಂದು ಬೃಹತ್ ಮತ್ತು ಮಧ್ಯಮ‌ ಕೈಗಾರಿಕಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಅವರು ತಿಳಿಸಿದ್ದಾರೆ. ಕೋವಿಡ್-೧೯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಗರದ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿದ ಅವರು , ಜನಸಾಮಾನ್ಯರಿಗೆ ತೊಂದರೆಯಾಗದಂತೆ ನಗರ ಪ್ರದೇಶಗಳಲ್ಲಿ ಸಾಧ್ಯವಾದರೆ ಮನೆಮನೆಗೆ ದಿನಸಿ ಹಾಗೂ ತರಕಾರಿ ತಲುಪಿಸಲು ಕ್ರಮ ಕೈಗೊಳ್ಳಬೇಕು. ಊಟೋಪಾಹಾರಗಳ ಪಾರ್ಸೆಲ್ ಒದಗಿಸಲು ಹೋಟೆಲ್ ನವರಿಗೆ ಆರಂಭಿಸಲು ಅವಕಾಶ ಕಲ್ಪಿಸಬೇಕು ಎಂದು ಹೇಳಿದ್ದಾರೆ .

ಸರಕು ಸಾಗಾಣಿಕೆಗೆ ಸಂಬಂಧಿಸಿದಂತೆ ಲಾರಿ ಅಸೋಸಿಯೇಷನ್ ನವರ ಸಭೆ ಕರೆದು ಸರಕು ಸಾಗಾಣಿಕೆಗೆ ಮುಕ್ತ ಅವಕಾಶ ನೀಡಿರುವ ಬಗ್ಗೆ ಮನವರಿಕೆ ಮಾಡಬೇಕು ಹಾಗೂ ಪಾಸ್ ಒದಗಿಸಬೇಕು ಎಂದು ಸಚಿವ ಶೆಟ್ಟರ್ ತಿಳಿಸಿದರು. ತುರ್ತು ಅಗತ್ಯವಿರುವ ವೈದ್ಯಕೀಯ ಸಲಕರಣೆ, ಸಾಮಗ್ರಿಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡ ಅವರು, ಯಾವುದೇ ಕಾರಣಕ್ಕೂ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಾವಿರ ಜನರಿಗೆ ಸಾಮೂಹಿಕ ಕ್ವಾರಂಟೈನ್ ವ್ಯವಸ್ಥೆ:

ಬೆಂಗಳೂರು ಹಾಗೂ ನೆರೆಯ ರಾಜ್ಯಗಳಿಂದ ರಾಜಸ್ತಾನ ಹಾಗೂ ಮಧ್ಯಪ್ರದೇಶದಿಂದ ಸುಮಾರು  ಒಂದು ಸಾವಿರ ಕಾರ್ಮಿಕರು ಆಗಮಿಸಿದ್ದು, ಆರೋಗ್ಯ ತಪಾಸಣೆ ನಡೆಸಿ ಊಟೋಪಹಾರ ವ್ಯವಸ್ಥೆ ಮಾಡಲಾಗಿದೆ. ಬೈಲಹೊಂಗಲ, ಹುಕ್ಕೇರಿ ಮತ್ತು ಕಿತ್ತೂರು ತಾಲ್ಲೂಕುಗಳಲ್ಲಿ ಸಾಮೂಹಿಕ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ತಿಳಿಸಿದರು. ವಲಸೆ ಕಾರ್ಮಿಕರು ಕಾಲ್ನಡಿಗೆಯಲ್ಲಿ ಆಗಮಿಸುತ್ತಿರುವುದರಿಂದ ಬೆಂಗಳೂರು ಸೇರಿದಂತೆ ಆಯಾ ಜಿಲ್ಲೆಗಳಲ್ಲಿ ಅವರಿಗೆ ಕ್ವಾರಂಟೈನ್ ವ್ಯವಸ್ಥೆ ಮಾಡುವ ಮೂಲಕ ಕಾರ್ಮಿಕರ ಸಂಚಾರ ತಡೆಗಟ್ಟಬಹುದು ಎಂದರು.

ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಲಾಗುವುದು ಎಂದು ಸಚಿವ ಜಗದೀಶ್ ಶೆಟ್ಟರ್ ಭರವಸೆ ತಿಳಿಸಿದರು. ಗೋವಾ ರಾಜ್ಯಕ್ಕೆ ಹೋಗುವ ಹಾಲು, ತರಕಾರಿ ಮತ್ತಿತರ ಸಾಮಗ್ರಿಗಳ ಸಾಗಾಣಿಕೆ ವಾಹನಗಳ ಸಂಚಾರಕ್ಕೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಗೋವಾ ಮುಖ್ಯಮಂತ್ರಿಗಳಿಗೂ ಮಾಹಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಬೊಮ್ಮನಹಳ್ಳಿ ಹೇಳಿದ್ದಾರೆ .

Previous ಏಪ್ರಿಲ್ನಲ್ಲಿ ಎರಡು ತಿಂಗಳ ಪಡಿತರ ವಿತರಣೆ.
Next 700 ವೆಂಟಿಲೇಟರ್ಗಳ ವ್ಯವಸ್ಥೆ ,ಕಳಪೆ ಮಾಸ್ಕ್ ಮಾರಾಟದ ವಿರುದ್ಧ ಕ್ರಮ

You might also like

0 Comments

No Comments Yet!

You can be first to comment this post!

Leave a Reply