ಕೋವಿಡ್ ಸೋಂಕು ಪತ್ತೆಗೆ  ಸರ್ವೆ ಮಾಡಲು ಜಿಲ್ಲಾಧಿಕಾರಿ ಸೂಚನೆ

ಕೋವಿಡ್ ಸೋಂಕು ಪತ್ತೆಗೆ ಸರ್ವೆ ಮಾಡಲು ಜಿಲ್ಲಾಧಿಕಾರಿ ಸೂಚನೆ

ಹಾಸನ-

 ಹಾಸನ  ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಸೋಂಕಿತರನ್ನು ಪತ್ತೆಹಚ್ಚಲು ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಸರ್ವೆ ಮಾಡಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್.ಗಿರೀಶ್ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿನ್ನೆ ನಡೆದ  ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿ ಮಾತನಾಡಿದ ಅವರು ಕೋವಿಡ್-19 ಸೋಂಕಿತರು ಆಸ್ಪತ್ರೆಗೆ ಬರುವ ಮುನ್ನವೇ ಅಥವಾ ಆಸ್ಪತ್ರೆಗೆ ಬಂದ ಕೂಡಲೇ ಸಾವನ್ನಪ್ಪುವುದನ್ನು ತಪ್ಪಿಸಲು ಅಧಿಕಾರಿಗಳು ಹೆಚ್ಚು ಮುತುವರ್ಜಿವಹಿಸಿ ಕಾರ್ಯನಿರ್ವಹಿಸಬೇಕು ಎಂದರು.                                             

 ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ತಾಲ್ಲೂಕು ಆರೋಗ್ಯ ಅಧಿಕಾರಿಗಳು ಆಶಾ ಕಾರ್ಯಕರ್ತೆಯರಿಗೆ ಸೂಕ್ತ ಸಲಹೆ ಹಾಗೂ ತರಬೇತಿಯನ್ನು ನೀಡಿ, ಸರ್ವೆ ಕುರಿತಾಗಿ ಶೀಘ್ರವೇ ವರದಿ ನೀಡುವಂತೆ ಅವರು ಸೂಚಿಸಿದರು. ರಕ್ತದೊತ್ತಡ, ಮದುಮೇಹದಂತಹ ರೋಗಗಳಿರುವವರಿಗೆ ಸೋಂಕು ತಗುಲಿದರೆ ಅಥವಾ ಸೋಂಕಿತರಲ್ಲಿ ವೈರಲ್ ರೇಟ್ ಜಾಸ್ತಿ ಇದ್ದಲ್ಲಿ ಯಾವ ಚಿಕಿತ್ಸೆ ನೀಡಿದರೂ ಸಹ ಪ್ರಯೋಜನವಿಲ್ಲ. ಹಾಗಾಗಿ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ, ಮುಖ್ಯವಾಗಿ ಕೋ-ಮಾರ್ಬಿಡ್ ಸ್ಥಿತಿಯಲ್ಲಿರುವವರ ಆಮ್ಲಜನಕ ಮಟ್ಟವನ್ನು ಪರೀಕ್ಷೆ ಮಾಡಬೇಕು ಎಂದು ಅವರು ಹೇಳಿದರು.

Previous ಅನಧಿಕೃತ ಕಟ್ಟಡ ತೆರವುಗೊಳಿಸಿದ ಮೂಡಾ
Next ಯಾವುದೇ ರಾಜಕೀಯ ಪ್ರಭಾವಕ್ಕೆ ಒಳಗಾಗುವುದಿಲ್ಲ.

You might also like

0 Comments

No Comments Yet!

You can be first to comment this post!

Leave a Reply