ಮೈಸೂರು ತಾಲ್ಲೂಕು ಕಚೇರಿಯಲ್ಲಿ ಉಚಿತ ಕಾನೂನು ಸೇವಾ ಕೇಂದ್ರ ಸ್ಥಾಪನೆ

ಮೈಸೂರು ತಾಲ್ಲೂಕು ಕಚೇರಿಯಲ್ಲಿ ಉಚಿತ ಕಾನೂನು ಸೇವಾ ಕೇಂದ್ರ ಸ್ಥಾಪನೆ

ಮೈಸೂರು-

 ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮೈಸೂರು ತಾಲ್ಲೂಕು ಕಚೇರಿಯಲ್ಲಿ ಸ್ಥಾಪಿಸಲಾದ ಉಚಿತ ಕಾನೂನು ಸೇವಾ ಕೇಂದ್ರವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ.ದೇವಮಾನೆ ಅವರು ಗುರುವಾರ ಉದ್ಘಾಟಿಸಿದರು.

 ಈ ವೇಳೆಯಲ್ಲಿ ಮಾತನಾಡಿದ ಅವರು, ಅನ್ಯಾಯಕ್ಕೆ ಒಳಗಾದ ಸಮಾಜದ ಕಟ್ಟಕಡೆಯ ನಾಗರಿಕರಿಗೂ ನ್ಯಾಯ ಸಿಗಬೇಕೆಂಬುದು ಭಾರತ ಸಂವಿಧಾನದ ಪ್ರಮುಖ ಆಶಯವಾಗಿದೆ. ಅದರಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಉಚಿತ ಕಾನೂನು ಸೇವಾ ಕೇಂದ್ರ ತೆರೆಯಲಾಗಿದ್ದು, ಸಾರ್ವಜನಿಕರು ಸದುಪಯೋಗ ಮಾಡಿಕೊಳ್ಳಬೇಕೆಂದು ತಿಳಿಸಿದರು.

 ಈ ಉಚಿತ ಕಾನೂನು ಸೇವಾ ಕೆಂದ್ರವು ಪ್ರತೀ ಗುರುವಾರ, ಶುಕ್ರವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ತೆರೆದಿರುತ್ತದೆ. ಮಹಿಳೆಯರು, ಹಿರಿಯ ನಾಗರಿಕರು, ಕೂಲಿ ಕಾರ್ಮಿಕರು ಸೇರಿದಂತೆ ವಾರ್ಷಿಕ ಆದಾಯ ಒಂದು ಲಕ್ಷದೊಳಗಿರುವ ಪ್ರತಿಯೊಬ್ಬರೂ ಯಾವುದೇ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಸೇವಾ ಕೇಂದ್ರಕ್ಕೆ ಆಗಮಿಸಿ ಸಮಾಲೋಚಿಸಬಹುದು ಎಂದರು.

 ಸರ್ಕಾರದ ಅನೇಕ ಸೇವೆಗಳು ಅರ್ಹ ಫಲಾನುಭವಿಗಳಿಗೆ ಸಿಗುತ್ತಿಲ್ಲ ಎಂದರೆ ಅಂತವರು ಕೂಡ ಕಾನೂನು ಸೇವಾ ಪ್ರಧಿಕಾರದ ವಕೀಲರು ಹಾಗೂ ಸ್ವಯಂ ಸೇವಕರನ್ನು ಸಂಪರ್ಕ ಮಾಡಬಹುದು. ಅಂತಹ ವಿಚಾರಕ್ಕೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳನ್ನು ವಿಚಾರಿಸಿ ಅರ್ಹರಿಗೆ ಸೇವೆ ಒದಗಿಸಲಾಗುವುದು ಎಂದು ಮಾಹಿತಿ ನೀಡಿದರು.

Previous ಪ್ರಧಾನ ಮಂತ್ರಿ ಗ್ರಾಮ್ ಸಡಕ್ ಯೋಜನೆಯಡಿ ಗ್ರಾಮಗಳ ಅಭಿವೃದ್ಧಿ
Next ಕೈಮಗ್ಗ ಮತ್ತು ಜವಳಿ ಉದ್ಯಮಗಳಿಗೆ ಪೂರಕ ಸಾಲ ಸೌಲಭ್ಯ ಕಲ್ಪಿಸಿ.

You might also like

0 Comments

No Comments Yet!

You can be first to comment this post!

Leave a Reply