ಮಾಜಿ ರಾಷ್ಟ್ರಪತಿ ನಿಧನ. ಡಿಕೆಸಿ ಸಂತಾಪ

ಮಾಜಿ ರಾಷ್ಟ್ರಪತಿ ನಿಧನ. ಡಿಕೆಸಿ ಸಂತಾಪ

ಬೆಂಗಳೂರು-

ಮಾಜಿ ರಾಷ್ಟ್ರಪತಿ, ಕಾಂಗ್ರೆಸ್ ಹಿರಿಯ ನಾಯಕ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಅವರ ಅಗಲಿಕೆಯ ನೋವನ್ನು ಅವರ ಕುಟುಂಬ ಸದಸ್ಯರು ಸೇರಿದಂತೆ ಅವರ ಅಪಾರ ಅಭಿಮಾನಿ ಬಳಗಕ್ಕೆ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ದೇಶದ ಇತಿಹಾಸ, ಸಂವಿಧಾನ ಮತ್ತು ಕಾನೂನಗಳ ಬಗ್ಗೆ ಅಪಾರ ಜ್ಞಾನವಿದ್ದ ನಾಯಕನನ್ನು ನಾವು ಕಳೆದುಕೊಂಡಿದ್ದೇವೆ , ಇದೆ ದೇಶಕ್ಕೆ ತುಂಬಲಾರದ ನಷ್ಟ ಎಂದಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಡಿ.ಕೆ ಶಿವಕುಮಾರ್ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.


ಪ್ರಣಬ್ ಮುಖರ್ಜಿ ಅವರು ಭಾರತ ಕಂಡ ಶ್ರೇಷ್ಠ ರಾಜಕಾರಣಿಗಳಲ್ಲಿ ಒಬ್ಬರು. ಅತ್ಯುತ್ತಮ ವ್ಯಕ್ತಿತ್ವ ಹೊಂದಿದ್ದ ಅವರು ಸುಮಾರು 5 ದಶಕಗಳ ಕಾಲ ರಾಜಕೀಯದಲ್ಲಿ ಸಕ್ರಿಯವಾಗಿ ಭಾಗಿಯಾಗಿ ಸೇವೆ ಸಲ್ಲಿಸಿದ ಮಹಾನ್ ನಾಯಕ ಎಂದು ಡಿಕೆಶಿ ಬಣ್ಣಿಸಿದ್ದಾರೆ. ‌

ಅವರ ಚಿಂತನೆ, ಕೆಲಸ ಹಾಗೂ ಸೇವೆಯಿಂದ ದೇಶದ ಸರ್ವಶ್ರೇಷ್ಠ ಭಾರತ ರತ್ನ ಪುರಸ್ಕಾರಕ್ಕೆ ಭಾಜನರಾದವರು. ಗಾಂಧಿ ಅವರ ಚಿಂತನೆಯನ್ನು ಅಳವಡಿಸಿಕೊಂಡಿದ್ದ ಪ್ರಣಬ್ ಮುಖರ್ಜಿ ಅವರನ್ನು ‘Man for All Seasons’ ಎಂದೇ ಬಣ್ಣಿಸಲಾಗುತ್ತಿತ್ತು. ದೇಶದ ಇತಿಹಾಸ, ಸಂವಿಧಾನ ಹಾಗೂ ಕಾನೂನಿನ ಬಗ್ಗೆ ಅಪಾರವಾದ ಜ್ಞಾನ ಹೊಂದಿದ್ದ ಮಹಾನ್ ನಾಯಕನನ್ನು ನಾವಿಂದು ಕಳೆದುಕೊಂಡಿದ್ದೇವೆ.

Previous ಸೂಪರ್ ಸ್ಪೆಷಾಲಿಟಿ ಟ್ರಾಮಾಕೇರ್ ಸೆಂಟರ್ ಲೋಕಾರ್ಪಣೆ
Next ಪ್ರಣಬ್ ಮುಖರ್ಜಿ ಬಗೆಗಿನ ನೆನಪು ಹಂಚಿಕೊಂಡ ಮೋದಿ

You might also like

0 Comments

No Comments Yet!

You can be first to comment this post!

Leave a Reply