ಐಪಿಎಲ್ ವೇಳಾ ಪಟ್ಟಿ ಬಿಡುಗಡೆ

ಐಪಿಎಲ್ ವೇಳಾ ಪಟ್ಟಿ ಬಿಡುಗಡೆ

ಬೆಂಗಳೂರು-

 ಕ್ರಿಕೆಟ್ ಅಭಿಮಾನಿಗಳು ನಿರೀಕ್ಷೆ ಮಾಡುತ್ತಿದ್ದ ಐಪಿಎಲ್-2020ರ ವೇಳಾಪಟ್ಟಿ ಕೊನೆಗೂ ಬಿಡುಗಡೆಯಾಗಿದ್ದು, ಸೆಪ್ಟಂಬರ್ 19ರಿಂದ ಪಂದ್ಯಗಳು ಆರಂಭವಾಗಲಿವೆ. ಮೊದಲ ಪಂದ್ಯವನ್ನು ಸಂಪ್ರಾದಯದಂತೆ ಕಳೆದ ಟೂರ್ನಿಯಲ್ಲಿ ಫೈನಲ್ ಆಡಿದ್ದ ಮುಂಬೈ ಇಂಡಿಯನ್ಸ್ ತಂಡ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ನಡೆಯಲಿದೆ. ಎರಡನೇ ಪಂದ್ಯದಲ್ಲಿ ಡೆಲ್ಲಿ ಡೇರೆ ಡೆವಿಲ್ಸ್ ಮತ್ತು ಪಂಜಾಬ್ ತಂಡಗಳು ಮುಖಾಮುಖಿಯಾಗಲಿದ್ದು, ಮೂರನೇ ಪಂದ್ಯ ಆರ್‌ಸಿಬಿ ಮತ್ತು ಹೈದರಾಬಾದ್ ತಂಡಗಳ ನಡುವೆ ನಡೆಯಲಿದೆ.

 ಇನ್ನು ಚೆನೈ ತಂಡವನ್ನು ಕರೋನಾ ಮಾಹಾ ಮಾರಿ‌ಕಾಡಿತ್ತು, ಚೆನೈ ಆಟಗಾರರಲ್ಲಿ ಮತ್ತು ಸಿಬ್ಬಂದಿಯಲ್ಲಿ ಕೊರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೊದಲ ಪಂದ್ಯವನ್ನು ಚೆನ್ನೈ ಆಡುವುದು ಅನುಮಾನ ಮೂಡಿತ್ತು. ಆದರೆ ಈಗ ಈ ಅನುಮಾನಕ್ಕೆ ವೇಳಾಪಟ್ಟಿ ಅನುಮಾನಗಳಿಗೆ ತೆರೆ ಎಳೆದಿದೆ.

 ಟೂರ್ನಿಯಲ್ಲಿ ಒಟ್ಟು 56 ಪಂದ್ಯಗಳು ನಡೆಯಲಿದ್ದು, 45ದಿನಗಳ ಕಾಲ ಲೀಗ್ ಹಂತದ ಪಂದ್ಯಗಳು ನಡೆಯಲಿವೆ. ವಾರದ 5 ದಿನದಲ್ಲಿ ಎಂದಿನಂತೆ ಕೇವಲ ಒಂದೇ ಪಂದ್ಯ ನಡೆಯುತ್ತದೆ. ಈ ಪಂದ್ಯ ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಆರಂಭವಾಗಲಿದೆ. ಇನ್ನೂ ಶನಿವಾರ ಮತ್ತು ಭಾನುವಾರ 2 ಪಂದ್ಯಗಳಿದ್ದು, ಮೊದಲ ಪಂದ್ಯ ಮಧ್ಯಾಹ್ನ 3.30ಕ್ಕೆ ಆರಂಭವಾಗಲಿದೆ. ಎರಡನೇ ಪಂದ್ಯ 7.30ಕ್ಕೆ ಆರಂಭವಾಗಲಿದೆ.

 ದುಬೈ, ಶಾರ್ಜಾ ಮತ್ತು ಅಬುಧಾಬಿ ಮೈದಾನದಲ್ಲಿ ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯ ಅಬುಧಾಬಿ ಸ್ಟೇಡಿಯಂನಲ್ಲಿ ನಡೆಯಲಿದೆ. ಕೊನೆಯ ಲೀಗ್ ಪಂದ್ಯ ಶಾರ್ಜಾ ಮೈದಾನದಲ್ಲಿ ನಡೆಯಲಿದೆ. ಲೀಗ್ ಹಂತದ ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಬಿಸಿಸಿಐ ಬಿಡುಗಡೆ ಮಾಡಿದ್ದು, ನಂತರ ನಡೆಯುವ , ಫೈನಲ್ ಪಂದ್ಯದ ಸ್ಥಳಗಳ ಮಾಹಿತಿಯನ್ನು ಪ್ರಕಟಿಸಿಲ್ಲ…

Previous ಬಳ್ಳಾರಿಯಲ್ಲಿಂದು 396 ಕೊರೊನಾ ಪಾಸಿಟಿವ್ ಕೇಸ್ ಗಳು‌ ಪತ್ತೆ…!
Next ಸೆ.9 ರಿಂದ‌ 11ರ ವರೆಗೆ ಟ್ರೇಡ್ ಲೈಸೆನ್ಸ್ ಕ್ಯಾಂಪ್

You might also like

0 Comments

No Comments Yet!

You can be first to comment this post!

Leave a Reply