ಕೈಮಗ್ಗ ಮತ್ತು ಜವಳಿ ಉದ್ಯಮಗಳಿಗೆ ಪೂರಕ ಸಾಲ ಸೌಲಭ್ಯ ಕಲ್ಪಿಸಿ.

ಕೈಮಗ್ಗ ಮತ್ತು ಜವಳಿ ಉದ್ಯಮಗಳಿಗೆ ಪೂರಕ ಸಾಲ ಸೌಲಭ್ಯ ಕಲ್ಪಿಸಿ.

ಹಾಸನ-

 ಕೈಮಗ್ಗ ಮತ್ತು ಜವಳಿ ಉದ್ಯಮ ನಡೆಸುತ್ತಿರುವವರಿಗೆ ಸಹಾಯವಾಗುವಂತೆ ಹೊಸ ಹೊಸ ಯೋಜನೆಗಳ ಕುರಿತು ಅರಿವು ಮೂಡಿಸಿ ಪೂರಕ ಸಾಲ ಸೌಲಭ್ಯ ಒದಗಿಸುವಂತೆ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರಾದ ಶ್ರೀಮಂತ ಬಾಬಾ ಸಾಹೇಬ ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

 ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು ಜಿಲ್ಲೆಯಲ್ಲಿನ ಸಿದ್ದ ಉಡುಪು ತರಬೇತಿ ಕೇಂದ್ರಗಳಿಂದ ನಿರುದ್ಯೋಗಿ ಯುವಕ ಯುವತಿಯರಿಗೆ ಸಿದ್ದ ಉಡುಪು ತಯಾರಿಕೆಯಲ್ಲಿ ತರಬೇತಿ ನೀಡಿ ಜೀವನಾಧಾರಕ್ಕೆ ವ್ಯವಸ್ಥೆ ಕಲ್ಪಿಸಿ ಎಂದರು.

 ಕೈಮಗ್ಗ ಮತ್ತು ಜವಳಿ ಉದ್ಯಮದಿಂದ ಈಗಾಗಲೇ ನಷ್ಟ ಅನುಭವಿಸಿ ಕಂಪನಿ ಮುಚ್ಚಿರುವವರಿಗೆ ಪೂರ್ಣ ಪ್ರಮಾಣದ ಸಹಕಾರ ಮತ್ತು ಸಾಲ ಸೌಲಭ್ಯ ನೀಡಿ ಉದ್ಯಮಿದಾರರು ಮರಳಿ ಪ್ರಾರಂಭಿಸುವಂತೆ ಅರಿವು ಮೂಡಿಸಿ ನಿರುದ್ಯೋಗಿಗಳಿಗೆ ಉದ್ಯೋಗವಕಾಶ ಕಲ್ಪಿಸುವ ವ್ಯವಸ್ಥೆ ಮಾಡಿ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

 ಕೈಮಗ್ಗ ಮತ್ತು ಜವಳಿ ಇಲಾಖೆ ಜಂಟಿ ನಿರ್ದೇಶಕರಾದ ಶ್ರೀಧರ್ ನಾಯಕ್, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಮೆಹಬೂಬ್ ಪಾಷಾ, ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜೀನೇಂದ್ರ, ಸಚಿವರ ಆಪ್ತ ಕಾರ್ಯದರ್ಶಿ ವಿಜಯ್ ಕುಮಾರ್ ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶಿವಲಿಂಗಪ್ಪ ಎನ್. ಕುಂಬಾರ್, ಹಾಗೂ ಮತ್ತಿತರರು ಸಭೆಯಲ್ಲಿ ಭಾಗಿಯಾಗಿದ್ದರು.

Previous ಮೈಸೂರು ತಾಲ್ಲೂಕು ಕಚೇರಿಯಲ್ಲಿ ಉಚಿತ ಕಾನೂನು ಸೇವಾ ಕೇಂದ್ರ ಸ್ಥಾಪನೆ
Next ಪಿಎಂ ಮೋದಿಯವರ 70 ನೇ ಜನ್ಮದಿನ

You might also like

0 Comments

No Comments Yet!

You can be first to comment this post!

Leave a Reply