ಆಪ್ತ ಸಮಾಲೋಚನೆ ಮೂಲಕ ಆತ್ಮಹತ್ಯೆ ತಡೆಗಟ್ಟಲು ಸಾಧ್ಯ

ಆಪ್ತ ಸಮಾಲೋಚನೆ ಮೂಲಕ ಆತ್ಮಹತ್ಯೆ ತಡೆಗಟ್ಟಲು ಸಾಧ್ಯ

ಚಿಕ್ಕಮಗಳೂರ-

ಆತ್ಮಹತ್ಯೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಲ್ಲ ಬದಲಾಗಿ ಪ್ರತಿಯೊಬ್ಬರೂ ಆಪ್ತ ಸಮಾಲೋಚನೆ ಮೂಲಕ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಂಡಾಗ ಆತ್ಮಹತ್ಯೆ ತಡೆಗಟ್ಟಲು ಸಾಧ್ಯವಾಗಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶುಭಗೌಡರ್ ಅವರು ಹೇಳಿದರು.

ಜನತೆಯಲ್ಲಿ ಮಾನಸಿಕ ಸ್ಥೈರ್ಯ ತುಂಬುವುದರೊಂದಿಗೆ ಅನೇಕ ಕಾರ್ಯಕ್ರಮಗಳ ಮೂಲಕ ಜನಜಾಗೃತಿ ಮೂಡಿಸಿ ದೇಶದಲ್ಲಿ ಆತ್ಮಹತ್ಯೆಯಂತಹ ಪ್ರಕರಣಗಳನ್ನು ತಡೆಗಟ್ಟುವ ಉದ್ದೇಶದಿಂದ ವಿಶ್ವ ಆರೋಗ್ಯ ಸಂಸ್ಥೆ, ವಲ್ಡ್ ಫೆಡರೇಶನ್ ಫಾರ್ ಮೆಂಟಲ್ ಹೆಲ್ತ್, ಐ,ಎ.ಎಸ್,ಬಿ ಸಹಯೋಗದಲ್ಲಿ ೨೦೦೩ ರಲ್ಲಿ ಮೊಟ್ಟ ಮೊದಲ ಬಾರಿಗೆ ಸೆ. ೧೦ ನ್ನು ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ ಆರಂಭಿಸಲಾಯಿತು ಎಂದರು.

ಪ್ರತಿ ವರ್ಷದಂತೆ ಸೆ.೧೦ ರಂದು ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಜಾಗೃತಿ ಕಾರ್ಯಕ್ರಮವನ್ನು ಆಚರಿಸುತ್ತಿದ್ದು ಈ ಬಾರಿಯ ಕೋವಿಡ್-೧೯ ಹಿನ್ನೆಲೆ ಸರಳವಾಗಿ ಆಚರಿಸಲಾಗುತ್ತಿದೆ, ನಿಮ್ಮದೊಂದು ಕ್ಷಣ ಉಳಿಸುವುದೊಂದು ಜೀವನ ಎಂಬ ಧ್ಯೇಯ ಘೋಷಣೆಯಂತೆ ಪ್ರತಿಯೊಬ್ಬರ ಜೀವನವು ಅತ್ಯಮೂಲ್ಯವಾದುದು ಕೆಲವೊಮ್ಮೆ ಒತ್ತಡದಿಂದ ಕೂಡಿದ್ದು ಆತ್ಮಹತ್ಯೆಯಂತಹ  ಆಲೋಚನೆಗೆ  ಒಳಗಾದಾಗ ವ್ಯಕ್ತಿಯೊಂದಿಗೆ ಸಮಾಲೋಚನೆ ನಡೆಸುವ ಮೂಲಕ ಮಾನಸಿಕ ಸ್ಥೈರ್ಯ ತುಂಬಿ ಜಾಗೃತಿ ಮೂಡಿಸಿದ್ದಲ್ಲಿ ಇಂತಹ ಪ್ರಕರಣಗಳನ್ನು ತಡೆಗಟ್ಟಬಹುದಾಗಿದೆ ಎಂದರು.

ಆತ್ಮಹತ್ಯೆಯಂತಹ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ೨೦೧೧ ರಲ್ಲಿ ವಿಶ್ವದ ೪೦ ರಾಷ್ಟಗಳು ಈ ಕಾರ್ಯಕ್ರಮಕ್ಕೆ ಕೈ ಜೋಡಿಸಿ ಹಲವಾರು ಜಾಗೃತಿ ಚಟುವಟಿಕೆಗಳನ್ನು ನಡೆಸುತ್ತಿವೆ. ೨೦೧೬ ರ ವರದಿಯನ್ವಯ  ವಿಶ್ವದಲ್ಲಿ ಪ್ರತಿ ೪೦ ಸೆಕೆಂಡ್‌ಗೆ ಒಬ್ಬರು ಆತ್ಮಹತ್ಯೆ ಮಾಡಿಕೊಂಡರೆ ಇತ್ತೀಚಿನ ವರದಿ ಪ್ರಕಾರ ಪ್ರತಿ ೪ ಸೆಕೆಂಡ್‌ಗೆ ಓರ್ವರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ದಾಖಲಾಗುತ್ತಿವೆ. ಜಿಲ್ಲೆಯಲ್ಲಿ ಕಳೆದ ಬಾರಿ ಸುಮಾರು ೬೯೨ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿದ್ದು ೨೦೨೦ ರಲ್ಲಿ ೩೬೮ ಸ್ವ-ಇಚ್ಚೆ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ ಇವುಗಳನ್ನು ಸಂಪೂರ್ಣವಾಗಿ ತಡೆಗಟ್ಟುವ ಉದ್ದೇಶದಿಂದ ಜಿಲ್ಲಾ ಆಸ್ಪತ್ರೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಒಳಗೊಂಡಂತೆ ವಿವಿಧ ಇಲಾಖೆಗಳು ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

Previous ನಾರಿಹಳ್ಳ ಜಲಾಶಯದಿಂದ ನೀರು ಬಿಡುಗಡೆ-ಹಳ್ಳದ ವ್ಯಾಪ್ತಿಯ ಜನ ಜಾನುವಾರುಗಳಿಗೆ ಎಚ್ಚರಿಕೆ
Next ಕೋವಿಡ್-19 ನಿಯಂತ್ರಣ ಮತ್ತು ಮಳೆ ಹಾನಿ ಬಗ್ಗೆ ಮಾಹಿತಿ ಪಡೆದ ಸಿಎಂ

You might also like

0 Comments

No Comments Yet!

You can be first to comment this post!

Leave a Reply