ಸೂಪರ್ ಸ್ಪೆಷಾಲಿಟಿ ಟ್ರಾಮಾಕೇರ್ ಸೆಂಟರ್ ಲೋಕಾರ್ಪಣೆ

ಸೂಪರ್ ಸ್ಪೆಷಾಲಿಟಿ ಟ್ರಾಮಾಕೇರ್ ಸೆಂಟರ್ ಲೋಕಾರ್ಪಣೆ

ಬಳ್ಳಾರಿ…

ಕಲಬುರಗಿಯಲ್ಲಿರುವ ಆಸ್ಪತ್ರೆಯನ್ನು ಏಮ್ಸ್ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಬೇಕು; ಈ ಮೂಲಕ ಹಿಂದುಳಿದ ಆ ಭಾಗದ ಜನರಿಗೆ ಹೆಚ್ಚಿನ ಆರೋಗ್ಯ ಸವಲತ್ತುಗಳು ಸಿಗುವಂತಾಗಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ ಅವರಿಗೆ ಕೋರಿದರು.
ಪಿಎಂಎಸ್‍ಎಸ್‍ವೈ ಯೋಜನೆ ಅಡಿ 150 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗಿರುವ ಸೂಪರ್ ಸ್ಪೇಷಾಲಿಟಿ ಟ್ರಾಮಾಕೇರ್ ಸೆಂಟರ್‍ಗೆ ಕೇಂದ್ರ ಆರೋಗ್ಯ ಸಚಿವರ ಜತೆಗೂಡಿ ಆನ್‍ಲೈನ್(ಇ-ಉದ್ಘಾಟನೆ) ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.


ಇದಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ತಮಗೆ ಪತ್ರ ಬರೆದಿರುವುದನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರಸ್ತಾಪಿಸಿದರು. ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಎದುರಿಸುವಲ್ಲಿ ಯಶಸ್ವಿಯಾಗಿದ್ದೇವೆ. ಬಳ್ಳಾರಿಯಲ್ಲಿ ಟ್ರಾಮಾಕೇರ್ ಸೆಂಟರ್ ನಿರ್ಮಾಣ ಮಾಡುವುದರಿಂದಾಗಿ ತುರ್ತು ಚಿಕಿತ್ಸೆಗಳಿಗಾಗಿ ಬೆಂಗಳೂರು ಕಡೆ ತೆರಳುವುದು ತಪ್ಪಲಿದ್ದು, ಇದು ಈ ಭಾಗದ ಜನರಿಗೆ ಸಂಜೀವಿನಿಯಾಗಲಿದೆ ಎಂದರು.


ರಾಜ್ಯ ಸರ್ಕಾರವು ರಾಜ್ಯದ ಜನತೆಯ ಆರೋಗ್ಯ ಸುಧಾರಣೆಗೆ ಅನೇಕ ಕಾರ್ಯಕ್ರಮ ರೂಪಿಸಿದೆ ಎಂದರು. ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಮಾತನಾಡಿ, ಪಿಎಂಎಸ್‍ಎಸ್‍ವೈ ಯೋಜನೆಯಡಿ ಈ ಆಸ್ಪತ್ರೆ ಅಸ್ತಿತ್ವಕ್ಕೆ ಬಂದಿದೆ. ವಾರ್ಷಿಕ 5.4 ಲಕ್ಷ ಜನರು ಅಪಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಅದಕ್ಕಾಗಿ ಅಪಘಾತ ಆದ ತಕ್ಷಣ ಇಂತಹ ಆಸ್ಪತ್ರೆಗಳ ಸೌಲಭ್ಯವಿದ್ದರೆ ಹೆಚ್ಚಿನ ಜೀವಗಳ ಹಾನಿಯಾಗುವುದು ತಪ್ಪಲಿದೆ ಎಂದರು.

ಬೆಂಗಳೂರು ಬಿಟ್ಟರೆ ಪ್ಲಾಸ್ಟಿಕ್ ಸರ್ಜರಿ ಈ ಆಸ್ಪತ್ರೆಯಲ್ಲಿ ನಡೆಯಲಿದ್ದು ಅಪಘಾತಗಳಲ್ಲಿ ಗಾಯಗೊಂಡವರಿಗೆ ಇದು ಸಹಕಾರಿ ಎಂದು ಹೇಳಿದ ಸಚಿವ ಡಾ.ಸುಧಾಕರ್ ಅವರು ರಾಜ್ಯದಲ್ಲಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು 20 ಸಾವಿರ ಐಸಿಯು ಬೆಡ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ರಾಜ್ಯದಲ್ಲಿರುವ ಮೆಡಿಕಲ್ ಕಾಲೇಜುಗಳಲ್ಲಿ ಸೀಟುಗಳ ಸಂಖ್ಯೆ ಹೆಚ್ಚಿಸುವಂತೆ ಅವರು ಕೇಂದ್ರ ಆರೋಗ್ಯ ಸಚಿವರಿಗೆ ಇದೇ ಸಂದರ್ಭದಲ್ಲಿ ಕೋರಿದರು.


ಈ ಸಂದರ್ಭದಲ್ಲಿ ಸಂಸದ ನಾಸೀರ್‍ಹುಸೇನ್, ಶಾಸಕರಾದ ಸೋಮಶೇಖರರೆಡ್ಡಿ, ವಿಧಾನಪರಿಷತ್ ಸದಸ್ಯ ಅಲ್ಲಂವೀರಭದ್ರಪ್ಪ, ಬುಡಾ ಅಧ್ಯಕ್ಷ ದಮ್ಮೂರು ಶೇಖರ್, ಕೇಂದ್ರ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದ ಜಂಟಿ ಕಾರ್ಯದರ್ಶಿ ಸುನೀಲ್ ಶರ್ಮಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ವೈದ್ಯಕೀಯ ಶಿಕ್ಷಣ ಇಲಾಖೆಯ ಟಿ.ಕೆ.ಅನಿಲಕುಮಾರ್, ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಎಸ್ಪಿ ಸಿ.ಕೆ.ಬಾಬಾ, ಜಿಪಂ ಸಿಇಒ ಕೆ.ಆರ್.ನಂದಿನಿ, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕ ಡಾ.ಪಿ.ಜಿ.ಗಿರೀಶ್, ವಿಮ್ಸ್ ನಿರ್ದೇಶಕ ಡಾ.ದೇವಾನಂದ ಸೇರಿದಂತೆ ಅನೇಕರು ಭಾಗಿಯಾಗಿದ್ದರು…

Previous ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ(84) ಚಿಕಿತ್ಸೆ ವಿಫಲ
Next ಮಾಜಿ ರಾಷ್ಟ್ರಪತಿ ನಿಧನ. ಡಿಕೆಸಿ ಸಂತಾಪ

You might also like

0 Comments

No Comments Yet!

You can be first to comment this post!

Leave a Reply