ವಿಜಯನಗರ ಪ್ರತ್ಯೇಕ ಜಿಲ್ಲೆ ವಿಚಾರ: ಹೊಸ ಸುಳಿವು ನೀಡಿದ ಆನಂದ್ ಸಿಂಗ್

ವಿಜಯನಗರ ಪ್ರತ್ಯೇಕ ಜಿಲ್ಲೆ ವಿಚಾರ: ಹೊಸ ಸುಳಿವು ನೀಡಿದ ಆನಂದ್ ಸಿಂಗ್

ಬಳ್ಳಾರಿ-

 ವಿಜಯನಗರ ಪ್ರತ್ಯೇಕ ಜಿಲ್ಲೆ ಘೋಷಣೆ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ಜಿಲ್ಲೆ ಘೋಷಣೆ ಕುರಿತು ಹೊಸ ಸುಳಿವು ನೀಡಿದ್ದಾರೆ. ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿಂದು ನಡೆದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಧ್ವಜಾರೋಹಣ ನೆರವೇರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ದಿನ ನಾವೆಲ್ಲರೂ ಅಣ್ಣ – ತಮ್ಮಂದಿರಂತೆ ಒಟ್ಟಿಗೆ ಇದ್ದೇವೆ. ನಮ್ಮಣ್ಣ ಇಲ್ಲೇ ಇದ್ದಾನೆ.‌ ಅಣ್ಣ ಹೇಳಿದಂತೆ ನಾನು ಕೇಳುತ್ತೇನೆ. ಅವರ ಆಶೀರ್ವಾದ ಸದಾ ನಮ್ಮ ಮೇಲಿದೆ. ಅವರು ಈಗಾಗಲೇ ಬಗ್ಗೆ ಭರವಸೆ ನೀಡಿದ್ದಾರೆ ಎಂದು ಶಾಸಕ ಗಾಲಿ ಸೋಮಶೇಖರರೆಡ್ಡಿ ಅವರಿಗೆ ಈ ವಿಚಾರವಾಗಿ ಕೈಮುಗಿದರು. ಪರೋಕ್ಷವಾಗಿ ಸೋಮಶೇಖರ ರೆಡ್ಡಿ ಅವರು ಸಹ ಜಿಲ್ಲೆ ಪ್ರತ್ಯೇಕ ಮಾಡುವ ಕುರಿತು ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಗಾಂಜಾ ಅಕ್ರಮದ ದೂರು‌ ನನ್ನ ಗಮನಕ್ಕೆ ಬಂದಿಲ್ಲ

 ಡ್ರಗ್ಸ್​​ ಮಾಫಿಯಾದ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಇದು ಗಮನಕ್ಕೆ ಬಂದಿಲ್ಲವೆಂದು ತಿಳಿಸಿದ್ದಾರೆ.

 ಸಚಿವ ಸಂಪುಟದ ವಿಸ್ತರಣೆ ಸಲುವಾಗಿ ದೆಹಲಿಗೆ ಹೋದ್ರೆ ತಪ್ಪೇನಿಲ್ಲ- ಸಚಿವ ಸಂಪುಟದ ವಿಸ್ತರಣೆ ಸಲುವಾಗಿಯೇ ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿಗೆ ಹೋದ್ರೆ ತಪ್ಪೇ‌ನಿಲ್ಲ. ಅವರು ನೆರೆಹಾವಳಿ ಪರಿಹಾರಕ್ಕಾಗಿ ಮನವಿ ಮಾಡಿಕೊಳ್ಳಲು ದೆಹಲಿಗೆ ಹೋಗುತ್ತಿದ್ದಾರೆ ಅಂತ ಮಾಹಿತಿಯಿದೆ. ರಾಜ್ಯ‌ ಸಚಿವ ಸಂಪುಟದ ವಿಸ್ತರಣೆ ವಿಚಾರವಾಗಿ ಸಿಎಂ ಬಿಎಸ್ ವೈ ದೆಹಲಿಗೆ ಹೋಗಲಿ ಬಿಡಿ ಎಂದರು.

Previous ಗಣಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಉಂಟಾದ ಬೆಳೆನಷ್ಟವೆಷ್ಟು...?
Next ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆಗೈದ ವಿಶ್ವಕರ್ಮ ಗುರುಗಳು ಸಮಾಜಕ್ಕೆ ಮಾದರಿ

You might also like

0 Comments

No Comments Yet!

You can be first to comment this post!

Leave a Reply